
ಬೆಂಗಳೂರು (ಮಾ.1): ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇಬಶೀಶ್ ಬೆಹ್ರಾ (28) ಮೃತ ವ್ಯಕ್ತಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಹೊಸ್ಮಾಟ್ ಜಂಕ್ಷನ್‌ನಲ್ಲಿ ಘಟನೆ ನಡೆದಿದೆ.
ಡಿಪೋ ನಂ. 47ಕ್ಕೆ ಸೇರಿದ ಬಿಎಂಟಿಸಿ ಬಸ್ ಜ್ಯೋತಿಪುರದಿಂದ ಕೆ.ಆರ್.ಮಾರುಕಟ್ಟೆಗೆ ತೆರಳುತ್ತಿತ್ತು, ಈ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ದೇಬಶೀಶ್ ಬೆಹ್ರಾ ಅವರ ಮೇಲೆ ಬಸ್ ಹರಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಹಲಸೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟ; ಐವರಿಗೆ ಗಂಭೀರ ಗಾಯ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ