Road Accident ಹುಬ್ಬಳ್ಳಿಯಲ್ಲಿ MLC ಬಸವರಾಜ ಹೊರಟ್ಟಿ ಕಾರು ಅಪಘಾತ

Published : Aug 07, 2022, 05:32 PM IST
Road Accident ಹುಬ್ಬಳ್ಳಿಯಲ್ಲಿ MLC ಬಸವರಾಜ ಹೊರಟ್ಟಿ ಕಾರು ಅಪಘಾತ

ಸಾರಾಂಶ

ಬಿಜೆಪಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಕಾರು ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜ್​ ಕ್ಯಾಂಪಸ್‌ನಲ್ಲಿ ಸಂಭವಿಸಿದೆ.

ಹುಬ್ಬಳ್ಳಿ, (ಆಗಸ್ಟ್. 07):  ಹುಬ್ಬಳ್ಳಿಯ ಕಾಲೇಜ್​ ಕ್ಯಾಂಪಸ್‌ನಲ್ಲಿ ಇಂದು(ಭಾನುವಾರ) ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಕಾರು ಅಪಘಾತವಾಗಿದೆ. 

ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮವೊಂದು ಮುಗಿಸಿಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಕೆಂಚಪ್ಪಗೆ ಗಂಭೀರ ಗಾಯವಾಗಿದ್ದು, ಅವರನ್ನ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಗಾಯಾಳು ಕೆಂಚಪ್ಪ ಸವದತ್ತಿ ‌ಮೂಲದ ಜೆಸಿಬಿ ಆಪರೇಟರ್ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿಲ್ಲೇ ಮತ್ತೊಂದು ಅಪಘಾತ
ಬಸವರಾಜ ಹೊರಟ್ಟಿ ಅವರ ಕಾರು ಹುಬ್ಬಳ್ಳಿಯಲ್ಲಿ ಅಪಘಾತಕ್ಕೀಡಾಗಿದೆ. ಅದೇ ಹುಬ್ಬಳ್ಳಿಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. 
ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ನಿಯಂತ್ರಣ ತಪ್ಪಿ ದರ್ಗಾಗೆ ಕಾರು ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ.

ಕುಂದಗೋಳ ತಾಲೂಕಿನ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಜಿಗಳೂರು ಬಳಿಯ ದರ್ಗಾವೊಂದಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಪತಿ-ಪತ್ನಿ, ಅಳಿಯ ಸಾವಿಗೀಡಾಗಿದ್ದು, ಮಗಳು ಗಂಭೀರ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.

ಕೆಯುಡಿಯ ಎಇಇ ರವೀಂದ್ರ ನಾಗನಾಥ, ಇವರ ಮಾವ ಹನಮಂತಪ್ಪ ಬೇವಿನಕಟ್ಟಿ, ಅತ್ತೆ ರೇಣುಕಾ ಬೇವಿನಕಟ್ಟಿ ಸ್ಥಳದಲ್ಲಿ ಸಾವಿಗೀಡಾಗಿದ್ದು, ರವೀಂದ್ರ ಅವರ ಪತ್ನಿ ಅರುಂಧತಿಗೆ ಗಂಭೀರ ಗಾಯಗಳಾಗಿವೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕುಂದಗೋಳ ಠಾಣೆ ಇನ್ಸಪೆಕ್ಟರ್ ಮಾರುತಿ ಗುಳ್ಳಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಗರದಲ್ಲಿ ಲಾರಿ-ಎರಡು ಬೈಕ್ ಮಧ್ಯೆ ಅಪಘಾತ
ಸಾಗರ: ಲಾರಿ ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಉಳ್ಳೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 206ರ ತಿರುವಿನಲ್ಲಿ ಭಾನುವಾರ ನಡೆದಿದೆ.

ಮೃತ ದುರ್ದೈವಿ ಪಡವಗೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಶಿವಮೊಗ್ಗದಿಂದ ಸಾಗರಕ್ಕೆ ಬರುತ್ತಿದ್ದ ಲಾರಿ, ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬುಲೆಟ್ ಹಾಗೂ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಬುಲೆಟ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಗರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?