Bitcoin ಹಗರಣಕ್ಕೆ ಮತ್ತೊಂದು ಟ್ವಿಸ್ಟ್: ಭೂಗತವಾಗಿದ್ದ ನಟೋರಿಯಸ್ ಹ್ಯಾಕರ್ ಅರೆಸ್ಟ್!

By Govindaraj S  |  First Published Oct 5, 2023, 8:55 AM IST

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆ ವೇಳೆ ಕಳೆದ ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ನಟೋರಿಯಸ್ ಹ್ಯಾಕರ್ ಸಿಕ್ಕಿಬಿದ್ದಿದ್ದಾನೆ. ಇಂಟರ್ ನ್ಯಾಷನಲ್ ಹ್ಯಾಕರ್​ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 


ಬೆಂಗಳೂರು (ಅ.05): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆ ವೇಳೆ ಕಳೆದ ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ನಟೋರಿಯಸ್ ಹ್ಯಾಕರ್ ಸಿಕ್ಕಿಬಿದ್ದಿದ್ದಾನೆ. ಇಂಟರ್ ನ್ಯಾಷನಲ್ ಹ್ಯಾಕರ್​ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಶ್ರೀಕಿಗೂ ಮುನ್ನವೇ ಹ್ಯಾಕಿಂಗ್‌ನಲ್ಲಿ ಕೈಚಳಕ ತೋರಿ ಭೂಗತವಾಗಿದ್ದ ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರ ಸಿಂಗ್‌ನನ್ನು ಎಸ್​ಐಟಿ ಬಂಧಿಸಿದ್ದು, ಈ ಪ್ರಕರಣದಲ್ಲಿ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆಗಳಿವೆ. ಶ್ರೀಕಿಗೂ ಮುನ್ನವೇ ಹ್ಯಾಕಿಂಗ್‌ನಲ್ಲಿ ಕೈಚಳಕ ತೋರಿ ಭೂಗತವಾಗಿದ್ದ ರಾಜೇಂದ್ರ ಸಿಂಗ್‌ನ್ನನು ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಇನ್ನು ಶ್ರೀಕಿಗೂ ಮೊದಲೇ ಹ್ಯಾಕಿಂಗ್ ನಲ್ಲಿ ಎಕ್ಸ್ಫರ್ಟ್ ಆಗಿದ್ದ ರಾಜೇಂದ್ರಸಿಂಗ್, ಸರ್ಕಾರಿ ಹಾಗೂ ಖಾಸಗಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡ್ತಾ ಇದ್ದ. 

Tap to resize

Latest Videos

ಕರ್ನಾಟಕದಲ್ಲಿ ರಾಕ್ಷಸರ ರಾಜ್ಯಭಾರ ನಡೆಯುತ್ತಿದೆ: ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಈ ಹ್ಯಾಕರ್​ಗಾಗಿ ಹುಡುಕಾಟ ಮಾಡುತ್ತಿದ್ದವು.  ಶ್ರೀಕಿಯಿಂದ ಸುಮಾರು 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ ಪಡೆದಿದ್ದ ಸಿಸಿಬಿ, ತನಿಖೆ ವೇಳೆಯಲ್ಲಿ ಪಂಜಾಬ್ ನ ರಾಜೇಂದ್ರ ಸಿಂಗ್ ಹೆಸರು ಕೇಳಿಬಂದಿತ್ತು. ಹೀಗಾಗಿ ರಾಜೇಂದ್ರ ಸಿಂಗ್ ಬಂಧನಕ್ಕೆ ಎಸ್ಐಟಿ ಟೀಂ ಬಲೆಬೀಸಿತ್ತು. ಸದ್ಯ ರಾಜೇಂದ್ರ ಸಿಂಗ್​ನನ್ನು ಪಂಜಾಬ್​ನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿರುವ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ರಾಜೇಂದ್ರ ಸಿಂಗ್ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆಗಳಿವೆ.

click me!