ರಾತ್ರಿ ವೇಳೆ ಮಂಕಿ ಕ್ಯಾಪ್ ಧರಿಸಿಕೊಂಡು ಬಂದ ವ್ಯಕ್ತಿಯಿಂದ ಬಿಜೆಪಿ ಜಿಲ್ಲಾ ಕಚೇರಿ ಕಾರ್ಯದರ್ಶಿ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಚಿಕ್ಕಮಗಳೂರಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು (ಡಿ.1): ರಾತ್ರಿ ವೇಳೆ ಮಂಕಿ ಕ್ಯಾಪ್ ಧರಿಸಿಕೊಂಡು ಬಂದ ವ್ಯಕ್ತಿಯಿಂದ ಬಿಜೆಪಿ ಜಿಲ್ಲಾ ಕಚೇರಿ ಕಾರ್ಯದರ್ಶಿ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಚಿಕ್ಕಮಗಳೂರಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲಾ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ದುರ್ಗೆಶ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಲೆ, ಮೂಗು, ಕೈಗೆ ಗಂಭೀರ ಗಾಯಗಳಾಗಿವೆ. ರಾತ್ರಿ ವೇಳೆ ಸಿಸಿಟಿವಿಯಲ್ಲಿ ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಬಂದಿದ್ದ ದುಷ್ಕರ್ಮಿ. ಬಂದವನೇ ಏಕಾಏಕಿ ಹಲ್ಲೆ ನಡೆಸಿ ಪರಾರಿ. ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದ್ದ ದುರ್ಗೇಶ್ ರನ್ನ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.
undefined
ಸೋನಿಯಾ, ರಾಹುಲ್, ಸುರ್ಜೇವಾಲಾ ವಕೀಲರಾಗಿರುವ ಸಿಎಂ ಸಿದ್ದರಾಮಯ್ಯನ ದಾರಿ ತಪ್ಪಿಸಿದ್ದಾರೆ!
ಆಸ್ಪತ್ರೆಗೆ ಸಿಟಿ ರವಿ ಭೇಟಿ:
ಹಲ್ಲೆ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಸಿಟಿ ರವಿ. ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ದುರ್ಗೆಶ್ ಆರೋಗ್ಯ ವಿಚಾರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಹೋಗಲ್ಲವೆಂದ ಸಿ.ಟಿ. ರವಿ ಮುನಿಸು ತಣಿಸಿದ್ರಾ ವಿಜಯೇಂದ್ರ!