ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ

By Suvarna News  |  First Published Sep 15, 2021, 5:50 PM IST

* ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ 
* 48 ವರ್ಷದ ಆಶಾ ಶೆಟ್ಟಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ
* ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ


ಉಡುಪಿ, (ಸೆ.14): ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಸೆ.15) ಕೃಷ್ಣನೂರು ಉಡುಪಿ ಜಿಲ್ಲೆಯಲ್ಲಿ ನಡೆದಿದೆ. 

ಉಡುಪಿ ಜಿಲ್ಲೆಯ ಅಲೆವೂರು ಗ್ರಾಮದ ಕುಕ್ಕಿಕಟ್ಟೆಯಲ್ಲಿ ಘಟನೆ ನಡೆದಿದ್ದು, 48 ವರ್ಷದ ಆಶಾ ಶೆಟ್ಟಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Tap to resize

Latest Videos

8 ತಿಂಗಳ ಹಿಂದೆ ನಡೆದ ಘೋರ ಘಟನೆ.. ಮಹಿಳೆಗೆ ಕೊಡಬಾರದ ಹಿಂಸೆ ಕೊಟ್ಟರು!

ಕಳೆದ ಕೆಲ ತಿಂಗಳ ಹಿಂದೆ ಅಷ್ಟೇ ಆಶಾ ಶೆಟ್ಟಿ ಅವರ ಮಗ ಆತ್ಮಹತ್ಯೆ ಮಾಡಿಕೊಂಡಿದ್ದ, ಇದರಿಂದ ಮನನೊಂದಿದ್ದ ತಾಯಿ ಆಶ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಆತ್ಮಹತ್ಯೆಗೂ ಮುನ್ನ ಮರಣ ಪತ್ರವನ್ನು ಬರೆದಿಟ್ಟಿದ್ದು, ತನ್ನ ಕಣ್ಣು ಸೇರಿದಂತೆ ಅಂಗಾಂಗಗಳನ್ನು ದಾನ ಮಾಡಿ ಇದು ನನ್ನ ಆಸೆ ಎಂದು ಉಲ್ಲೇಖಿಸಿದ್ದಾರೆ. ಘಟನೆ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

click me!