ಬೆಡ್ ಬ್ಲಾಕಿಂಗ್ ದಂಧೆ: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನ!

Published : May 25, 2021, 03:47 PM IST
ಬೆಡ್ ಬ್ಲಾಕಿಂಗ್ ದಂಧೆ: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನ!

ಸಾರಾಂಶ

* ಆಸ್ಪತ್ರೆಯ ಬೆಡ್​​ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅರೆಸ್ಟ್​​​ * ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನ * ಆಸ್ಪತ್ರೆಯಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುತ್ತಿದಂತೆ ಆರೋಪಿಯನ್ನು ಬಂಧಿಸಿದ ಸಿಸಿಬಿ

ಬೆಂಗಳೂರು, (ಮೇ.25): ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಮ್ಮನಹಳ್ಳಿಯ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತರೊಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಎನ್ನಲಾದ ಬಾಬು. ಬೊಮ್ಮನಹಳ್ಳಿ ವಾರ್ ರೂಂ ಸಿಬ್ಬಂದಿಯ ಹೇಳಿಕೆ ಮತ್ತು ರೂಂನಲ್ಲಿದ್ದ ಸಿಸಿ ಟಿವಿ ಮಾಹಿತಿ ಆಧರಿಸಿ ಆರೋಪಿಯ ಬಂಧನವಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಬೆಡ್ ಸ್ಕ್ಯಾಮ್‌ಗೆ ಬಿಜೆಪಿ ನಾಯಕರೇ ಕಿಂಗ್ ಪಿನ್‌ಗಳು: ದಿನೇಶ್ ಗುಂಡೂರಾವ್ ಗಂಭೀರ ಆರೋಪ

ಪ್ರಕರಣ ಸಂಬಂಧ ಈ ಮೊದಲೇ ಬಂಧನವಾಗಿದ್ದ ನೇತ್ರಾವತಿ ಆರೋಪಿ ಬಾಬು ಮೂಲಕವೇ ಬೆಡ್​​ ಬುಕ್ಕಿಂಗ್​ ಮಾಡಿಸುತ್ತಿದ್ದರು ಎನ್ನಲಾಗಿದೆ. ತಾನೊಬ್ಬ ಸಮಾಜ ಸೇವಕ ಎಂದು ಹೇಳಿಕೊಂಡಿದ್ದ ಬಾಬು, ಶಾಸಕ ಸತೀಶ್ ರೆಡ್ಡಿ ಅವರ ಜೊತೆ ಒಡಾಡಿಕೊಂಡಿದ್ದ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಬಾಬು ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುತ್ತಿದಂತೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ದಕ್ಷಿಣ ವಲಯದ ಕೋವಿಡ್ ವಾರ್ ರೂಮ್ ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ಈ ತಿಂಗಳ ಆರಂಭದಲ್ಲಿ ಬಯಲು ಮಾಡಿದ್ದರು. ಸಧ್ಯ ಇಡೀ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!
ದಿವ್ಯಾಂಗ ಯುವತಿ ಮೇಲೆ ಬಲತ್ಕಾರ: ಯಾರಿಗೂ ಹೇಳದಂತೆ ಬೆದರಿಕೆ!