ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ವರ್ತೂರು ರಸ್ತೆಯಲ್ಲಿ ನಡೆದಿದೆ. ಎಳಂಗೋವನ್ ಸೆಂಕತ್ತವಲ್ (45) ಮೃತ ಬೈಕ್ ಸವಾರ. ನೆನ್ನೆ ಬೆಳಗ್ಗೆ 9.30ರ ಸುಮಾರಿಗೆ ಸಂಭವಿಸಿರುವ ಅಪಘಾತ.
ಬೆಂಗಳೂರು (ಜ.6): ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ವರ್ತೂರು ರಸ್ತೆಯಲ್ಲಿ ನಡೆದಿದೆ.
ಎಳಂಗೋವನ್ ಸೆಂಕತ್ತವಲ್ (45) ಮೃತ ಬೈಕ್ ಸವಾರ. ನೆನ್ನೆ ಬೆಳಗ್ಗೆ 9.30ರ ಸುಮಾರಿಗೆ ಸಂಭವಿಸಿರುವ ಅಪಘಾತ. ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ತೆರಳುತಿದ್ದ ಮೃತ ಸವಾರ. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಲ್ಲಿ ಬಿದ್ದ ಬೈಕ್ ಸವಾರನಿಗೆ ತಲೆ ಮುಖದ ಭಾಗಕ್ಕೆ ಪೆಟ್ಟಾಗಿ ತೀವ್ರವಾಗಿ ಗಾಯಗೊಂಡಿದ್ದ. ಬಳಿಕ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟ ಬೈಕ್ ಸವಾರ. ಘಟನೆ ಸಂಬಂಧ ಎಚ್ ಎ ಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿದ ರಸ್ತೆ ಅಪಘಾತ: ಸಾವಿನ ಸಂಖ್ಯೆಯಲ್ಲೂ ಏರಿಕೆ..!
ಅಪಘಾತ ತಪ್ಪಿಸಲು ಹೋಗಿ ಮುಗುಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್!
ಚೆನ್ನರಾಯಪಟ್ಟಣ: ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪಕ್ಕಕ್ಕೆ ಸರಿದ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಬದಿಯ ಸಿಮೆಂಟ್ ಕಟ್ಟೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಇಲ್ಲಿಯ ಗೌಡಗೆರೆ ಬಳಿ ನಡೆದಿದೆ. ಪರಿಣಾಮ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಚನ್ನರಾಯಪಟ್ಟಣ ತಾ. ಗೌಡಗೆರೆ ಬಳಿ ಬಸ್ಸನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಓಡಿಸಿಕೊಂಡು ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದ ತಪ್ಪಿಸಲು ಹೋಗಿ ಬಸ್ ಅನ್ನು ಪಕ್ಕ ತಿರುಗಿಸಿದ ಪರಿಣಾಮ ಬಸ್ ರಸ್ತೆಯ ಎಡಬದಿಯಲ್ಲಿದ್ದ ಸಿಮೆಂಟ್ ಕಟ್ಟೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದಿದೆ. ಬಸ್‌ನಲ್ಲಿದ್ದ ಶಿಲ್ಪಾ ಅವರ ಬಲಕಾಲು, ಬಲಗೈ, ಮೈಕೈಗೆ ಪೆಟ್ಟಾಗಿದ್ದು, ಬಸ್‌ನಲ್ಲಿದ್ದ ಬಸವೇಗೌಡ, ಲೋಕೇಶ್, ಬಸ್ ಕಂಡಕ್ಟರ್ ಮಲ್ಲಪ್ಪ ಅವರಿಗೆ ಗಾಯಗಳಾಗಿವೆ.
ಭಿಕ್ಷೆ ಬೇಡುವ ಬಾಲಕಿಯನ್ನೂ ಬಿಡದೇ ಕಾರಿನಲ್ಲಿ ಕೈಕಾಲು ಕಟ್ಟಿ ಎತ್ತಾಕೊಂಡೋದ ಕೇರಳದ ಕಾಮಿಷ್ಟರು!
ಸ್ಥಳೀಯ ಜನರು ಅವರನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಪಘಾತಕ್ಕೆ ಕಾರಣವಾದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.