ಬೆಂಗಳೂರು: ನಗರದ ಮತ್ತೊಂದು ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ! ಸ್ಥಳಕ್ಕೆ ದೌಡಾಯಿಸಿದ ಯಶವಂತಪುರ ಪೊಲೀಸರು!

By Ravi JanekalFirst Published Feb 4, 2024, 8:51 AM IST
Highlights

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳಿಸುವ ಚಾಳಿ ಮುಂದುವರಿಸಿರುವ ಕಿಡಿಗೇಡಿಗಳು, ನಗರದ ಮತ್ತೊಂದು ವಿದ್ಯಾಸಂಸ್ಥೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬೆಂಗಳೂರು (ಫೆ.4) ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳಿಸುವ ಚಾಳಿ ಮುಂದುವರಿಸಿರುವ ಕಿಡಿಗೇಡಿಗಳು, ನಗರದ ಮತ್ತೊಂದು ವಿದ್ಯಾಸಂಸ್ಥೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ನಗರದ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿರುವ ಕಿಡಿಗೇಡಿಗಳು. Sahukarisrinuvasarao65@gmail.com ಮೂಲಕ ಇಮೇಲ್ ಕಳಿಸಿ ಬಾಂಬ್ ಬೆದರಿಕೆ ಹಾಕಿರುವ ದುಷ್ಕರ್ಮಿಗಳು, "ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೇವೆ. ಬೆಳಗ್ಗೆ 10.20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಕಳಿಸಲಾಗಿದೆ.

Latest Videos

ಶಾಲೆ ಆಯ್ತು, ಈಗ ಮ್ಯುಸಿಯಂಗೂ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌!

ಬಾಂಬ್ ಬೆದರಿಕೆ ಇಮೇಲ್ ಕಂಡು ಬೆಚ್ಚಿಬಿದ್ದ ಆಡಳಿತ ಮಂಡಳಿ ತಕ್ಷಣ ಯಶವಂತಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುವ ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ. ಸದ್ಯ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್  ಭೇಟಿ ನೀಡಿದ್ದು,  ಸ್ಥಳ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಎನ್ನಲಾಗಿದೆ. ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಹಿನ್ನೆಲೆ ಗಂಭೀರವಾಗಿ ಪರಿಗಣಿಸಿರುವ ಯಶವಂತಪುರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಗೆ ಮುಂದಾಗಿರುವುದು ತಿಳಿದುಬಂದಿದೆ.

ಶಾಲೆಗಳಿಗೆ ಪದೇಪದೆ ಹುಸಿಬಾಂಬ್ ಬೆದರಿಕೆ

ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಇದೇ ರೀತಿ ಇಮೇಲ್ ಮೂಲಕ ಸುಮಾರು 60ಕ್ಕೂ ಹೆಚ್ಚು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆಯೊಡ್ಡಿ ಆತಂಕ ಸೃಷ್ಟಿಸಿದ್ದ ಕಿಡಿಗೇಡಿಗಳು.  ಇ ಮೇಲ್ ನಲ್ಲಿ ಶಾಲಾ ಕ್ರೀಡಾಂಗಣ, ಆವರಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಬರೆಯಲಾಗಿತ್ತು. ಇದು ಭಾರೀ ಸುದ್ದಿ ಮಾಡಿತ್ತು. ಇದೀಗ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಇಮೇಲ್ ಮೂಲಕ ಬೆದರಿಕೆಯೊಡ್ಡಿರುವ ಕಿಡಿಗಳು. 

ಪತಿ ಮೇಲಿನ ಕೋಪಕ್ಕೆ ಪೊಲೀಸರಿಗೆ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ ಪತ್ನಿ!

click me!