ಚಿಕ್ಕಮಗಳೂರು: ಪ್ರೀತಿಸಿದ ಹುಡುಗಿ ಮದುವೆ ನಿರಾಕರಣೆ: ಪ್ರಿಯಕರ ಆತ್ಮಹತ್ಯೆ

By Suvarna News  |  First Published May 30, 2022, 4:25 PM IST

"ನನಗೆ ಗಾನವಿ ಮೋಸ ಮಾಡಿದಳು ಎಂದು ವಾಯ್ಸ್ ಮೆಸೇಜ್ ಕಳುಹಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಚಿಕ್ಕಮಗಳೂರು (ಮೇ 30): ಪ್ರೀತಿಸಿದ ಹುಡುಗಿ ಮದುವೆಗೆ ನಿರಾಕರಿಸಿದ ಹಿನ್ನೆಲೆ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಎನ್.ಆರ್. ಪುರ ತಾಲೂಕಿನ ಮುತ್ತಿನಕೊಪ್ಪ ಬಳಿಯ ಶಂಕರಪುರದಲ್ಲಿ ನಡೆದಿದೆ. ನೇಣುಬಿಗಿದುಕೊಂಡು ಚೇತನ್ (31) ಸಾವಿಗೆ ಶರಣಾಗಿದ್ದಾರೆ. "ನನಗೆ ಗಾನವಿ ಮೋಸ ಮಾಡಿದಳು ಎಂದು ವಾಯ್ಸ್ ಮೆಸೇಜ್ ಕಳುಹಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. "ನಾನು ಗಾನವಿ ಒಂಬತ್ತು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದೀವಿ,  ನನ್ನಿಂದ ಗಾನವಿ ನಾಲ್ಕು ಲಕ್ಷ ಹಣವನ್ನು ಕಿತ್ತುಕೊಂಡಿದ್ದಾಳೆ" ಎಂದು ವಾಯ್ಸ್ ಮೆಸೇಜಿನಲ್ಲಿ ಚೇತನ್ ಆರೋಪ ಮಾಡಿದ್ದಾರೆ. 

ಅಲ್ಲದೇ  ಚೇತನ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ. "ನನ್ನ ಸಾವಿಗೆ ನ್ಯಾಯ ಸಿಗಬೇಕೆಂದರೆ ಆಕೆಗೆ ಶಿಕ್ಷೆಯಾಗಬೇಕು,  ನನ್ನ ಚಿತೆಗೆ ಗಾನವಿ ಬೆಂಕಿ ಇಡಬೇಕು, ಆಕೆ ಬರುವತನಕ ಹೆಣವನ್ನು ಕೆಳಗಿಳಿಸಬೇಡಿ. ನನಗೆ ಮಾನಸಿಕ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ" ಎಂದು ಸಂಬಂಧಿಕರಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಚೇತನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ  ಎನ್.ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  

Tap to resize

Latest Videos

ಇದನ್ನೂ ಓದಿ: Chitradurga: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ ಪತ್ನಿ!

click me!