ಫ್ರೀಡಂ ಪಾರ್ಕ್ ಹಿಂಭಾಗದಲ್ಲಿರುವ ಕಸ ವಿಲೇವಾರಿ ಘಟಕದ ಬಳಿ ವಿಕ್ಕಿ ಎಂಬಾತನನ್ನ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಉಪ್ಪಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು(ಜು.16): ಕಸ ವಿಲೇವಾರಿ ಘಟಕದಲ್ಲಿ ವ್ಯಕ್ತಿಯೊಬ್ಬನನ್ನ ದುಷ್ಕರ್ಮಿಗಳು ಹತ್ಯೆಗೈದ ಘಟನೆ ನಗರದ ಫ್ರೀಡಂ ಪಾರ್ಕ್ ಹಿಂಭಾಗದಲ್ಲಿ ಇಂದು(ಮಂಗಳವಾರ) ನಡೆದಿದೆ. ವಿಕ್ಕಿ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ.
ಫ್ರೀಡಂ ಪಾರ್ಕ್ ಹಿಂಭಾಗದಲ್ಲಿರುವ ಕಸ ವಿಲೇವಾರಿ ಘಟಕದ ಬಳಿ ವಿಕ್ಕಿ ಎಂಬಾತನನ್ನ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಉಪ್ಪಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಗುವೆಂದೂ ನೋಡದೇ ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ
ಕಸ ವಿಲೇವಾರಿ ಘಟಕದಲ್ಲಿ ವಿಕ್ಕಿ ಮೇಲೆ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ ದುಷ್ಕರ್ಮಿಗಳು. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಉಪ್ಪಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.