ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಅಧಿಕಾರಿ ಅಮಾನತುಗೊಳಿಸಿದ ಸರ್ಕಾರ

By Suvarna News  |  First Published Jul 8, 2022, 10:19 PM IST

Latest Crime News: ರಾಂಚಿಯ ಕುಂತಿಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸೈಯದ್ ರಿಯಾಜ್ ಅಹ್ಮದ್ ಅವರನ್ನು ಮಂಗಳವಾರ ಬಂಧಿಸಿ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ


ರಾಂಚಿ (ಜು. 08): ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಟ್ರೈನಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಭಾರತೀಯ ಆಡಳಿತ ಸೇವಾ ಅಧಿಕಾರಿ ಸೈಯದ್ ರಿಯಾಜ್ ಅಹ್ಮದ್‌ರನ್ನು ಜಾರ್ಖಂಡ್ ಸರ್ಕಾರ ಶುಕ್ರವಾರ ಅಮಾನತುಗೊಳಿಸಿದೆ. ಕುಂತಿಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಅಹ್ಮದ್‌ರನ್ನ ಮಂಗಳವಾರ ಬಂಧಿಸಲಾಗಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿಯು ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ ನಂತರ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

"ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಕುಂತಿಯ ಎಸ್‌ಡಿಎಂ ಸೈಯದ್ ರಿಯಾಜ್ ಅಹ್ಮದ್ ಅವರನ್ನು ಅಮಾನತುಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ. ಎಸ್‌ಡಿಎಂ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದ ಆರೋಪ ಹೊರಿಸಲಾಗಿದೆ" ಎಂದು ಮುಖ್ಯಮಂತ್ರಿ ಕಚೇರಿ ಹೊರಡಿಸಿದ ಹೇಳಿಕೆ ತಿಳಿಸಿದೆ.

Tap to resize

Latest Videos

ಅಹ್ಮದ್ ಅವರು ಐಪಿಸಿ ಸೆಕ್ಷನ್ 354, 354A (ಲೈಂಗಿಕ ಕಿರುಕುಳ) ಮತ್ತು 509 ಅನ್ವಯ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 5 ರಂದು ನ್ಯಾಯಾಲಯವು ಅಧಿಕಾರಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

ಇದನ್ನೂ ಓದಿ: ಮಹಿಳಾ ಸಿಬ್ಬಂದಿ ರಜೆ ಕೇಳಿದ್ರೆ ಲಾಡ್ಜ್‌ನ ಮಂಚಕ್ಕೆ ಕರಿತಾನೆ ಮೇಲಾಧಿಕಾರಿ!

ಸಂತ್ರಸ್ತೆ ಸೇರಿದಂತೆ ಐಐಟಿಯ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ತರಬೇತಿಗಾಗಿ ಹೊರ ರಾಜ್ಯದಿಂದ ಕುಂತಿಗೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಶನಿವಾರ ಉಪ ಅಭಿವೃದ್ಧಿ ಆಯುಕ್ತರ ನಿವಾಸದಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ಪಾರ್ಟಿಯಲ್ಲಿ ಎಸ್‌ಡಿಎಂ ಆಕೆಯನ್ನು ಒಬ್ಬಂಟಿಯಾಗಿ ಕಂಡು ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಹ್ಮದ್ ಮತ್ತು ಪಾರ್ಟಿಯಲ್ಲಿ ಭಾಗವಹಿಸಿದ್ದ ಕೆಲವು ಅತಿಥಿಗಳನ್ನು ವಿಚಾರಣೆಗೊಳಪಡಿಸಿದ ನಂತರ ಪೋಲೀಸರು, ಪ್ರಾಥಮಿಕವಾಗಿ ಆರೋಪ ನಿಜವೆಂದು ಕಂಡುಕೊಂಡಿದ್ದಾರೆ. 

click me!