Bengaluru News: ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು, ಹಲ್ಲೆ ನಡೆಸಿ ದರೋಡೆ ನಡೆಸಲಾಗಿದ್ದು 400 ಗ್ರಾಂ ಚಿನ್ನಾಭರಣ, 50 ಗ್ರಾಂ ಬೆಳ್ಳಿ, 5 ಲಕ್ಷ ನಗದು ಎಗರಿಸಿ ಎಸ್ಕೇಪ್ ಆಗಿದ್ದಾರೆ.
ಬೆಂಗಳೂರು (ಜು. 09): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ (Astrologer) ಮನೆಯಲ್ಲಿ ರಾಬರಿ ನಡೆದಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಯಲ್ಲಿ ದರೋಡೆ ನಡೆದಿದೆ. ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು, ಹಲ್ಲೆ ನಡೆಸಿ ದರೋಡೆ ಮಾಡಲಾಗಿದ್ದು, ಕಳ್ಳರು 400 ಗ್ರಾಂ ಚಿನ್ನಾಭರಣ, 50 ಗ್ರಾಂ ಬೆಳ್ಳಿ, 5 ಲಕ್ಷ ನಗದು ಎಗರಿಸಿ ಎಸ್ಕೇಪ್ ಆಗಿದ್ದಾರೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ಪಿಸ್ತೂಲ್ ತೋರಿಸಿ ನೌಕರನ ಕೈಕಾಲು ಕಟ್ಟಿ 1.58 ಕೋಟಿ ಚಿನ್ನ ದರೋಡೆ: ಇನ್ನು ಗ್ರಾಹಕರ ಸೋಗಿನಲ್ಲಿ ಆಭರಣ ಅಂಗಡಿಗೆ ಬಂದಿದ್ದ ನಾಲ್ವರು ದುಷ್ಕರ್ಮಿಗಳು ನೌಕರನಿಗೆ ಪಿಸ್ತೂಲ್ ತೋರಿಸಿ ಕೈ ಕಾಲು ಕಟ್ಟಿ ನಗದು ಸೇರಿದಂತೆ 1.58 ಕೋಟಿ ರು. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಗುಂಡಿನ ದಾಳಿ ನಡುವೆಯೂ 3 ಕಿ.ಮೀ ಚೇಸ್: ಚಿನ್ನದಂಗಡಿ ದರೋಡೆ ಮಾಡಿದ್ದ ಖತರ್‌ನಾಕ್ ಗ್ಯಾಂಗ್ ಅಂದರ್
ಮೈಲಸಂದ್ರದ ‘ರಾಮದೇವ್ ಬ್ಯಾಂಕರ್ಸ್ ಆ್ಯಂಡ್ ಜ್ಯೂವೆಲರಿ’ ಮಳಿಗೆಯಲ್ಲಿ ಸೋಮವಾರ ಬೆಳಗ್ಗೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ಪ್ರಕರಣ ಭೇದಿಸಲು ರಚಿಸಿರುವ ಪೊಲೀಸರ ನಾಲ್ಕು ತಂಡಗಳು ದುಷ್ಕರ್ಮಿಗಳ ಪತ್ತೆಗೆ ಕಾರ್ಯ ಪ್ರವೃತ್ತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.