ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ. ಇನ್ನೊಂದೆಡೆ ಬಸ್ಸಿನಡಿ ಪಾದಾಚಾರಿ ಸಿಲುಕಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಚಾಮರಾಜನಗರ (ಅ.24): ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ.
ದುರ್ಘಟನೆಯಲ್ಲಿ 24 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಯಾವುದೇ ಪ್ರಾಣಾಪಾಯದ ಬಗ್ಗೆ ತಿಳಿದುಬಂದಿಲ್ಲ. ಪಶ್ಚಿಮ ಬಂಗಾಳ ಮೂಲದ ಪ್ರವಾಸಿ ಬಸ್ ಊಟಿಯಿಂದ ಮೈಸೂರು ಕಡೆಗೆ ಹೊರಟಿದ್ದ ಮೇಲುಕಾಮನಹಳ್ಳಿ ಬಳಿ ಬಂಡಿಪುರ ಕಾಡಿನ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಬಸ್ ವೇಗವಾಗಿದ್ದರಿಂದ ಪಲ್ಟಿಯಾಗಿದೆ. ಸದ್ಯ ದುರ್ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
undefined
ಬಳ್ಳಾರಿ ಭತ್ತದ ಗದ್ದೆಯಲ್ಲಿ ನಾಲ್ಕು ಚಕ್ರಗಳನ್ನು ಮೇಲೆತ್ತಿಕೊಂಡು ಬಿದ್ದ ಕೆಎಸ್‌ಆರ್‌ಟಿಸಿ ಕೆಂಪು ಬಸ್
ಬಸ್ಸಿನಡಿ ಬಿದ್ದು ಪಾದಾಚಾರ ಸ್ಥಳದಲ್ಲೇ ಸಾವು
ಮಂಗಳೂರು: ಸಿಟಿ ಬಸ್ ಅಡಿಗೆ ಬಿದ್ದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಸ್ಟೇಟ್‌ಬ್ಯಾಂಕ್‌ನ ರಾವ್ ಎಂಡ್ ರಾವ್ ಸರ್ಕಲ್‌ನಲ್ಲಿ ಸೋಮವಾರ ನಡೆದಿದೆ.
ಸ್ಟೇಟ್‌ಬ್ಯಾಂಕ್‌ನಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ರಾವ್ ಎಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು, ಬಸ್ಸಿನ ಎದುರಿನ ಚಕ್ರದಡಿಗೆ ಸಿಲುಕಿದ್ದಾರೆ. ವ್ಯಕ್ತಿಯ ತಲೆ ಪೂರ್ಣ ಛಿದ್ರಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು: ಫ್ಲೈಓವರ್‌ನಲ್ಲಿ ಬಿಎಂಟಿಸಿ ಬಸ್ ಪಲ್ಟಿ..!
ಮುಖ ಛಿದ್ರಗೊಂಡ ಕಾರಣ ವ್ಯಕ್ತಿಯ ಮುಖ ಪರಿಚಯ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿ ಸುಮಾರು 40-42 ವರ್ಷ ವಯಸ್ಸಿನವರಾಗಿದ್ದು, ಅವರ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.