ದೆಹಲಿ: ವಿದೇಶಿ ಮಹಿಳೆ ಮುಂದೆ ಹಸ್ತಮೈಥುನ: ಕ್ಯಾಬ್ ಚಾಲಕ ಅರೆಸ್ಟ್‌

By Suvarna NewsFirst Published Sep 5, 2022, 2:37 PM IST
Highlights

Crime News: ಯುಕೆ ಮಹಿಳೆ ಮುಂದೆ ಹಸ್ತಮೈಥುನ ಮಾಡಿಕೊಂಡ ಆರೋಪದ ಮೇಲೆ ದೆಹಲಿಯಲ್ಲಿ ಕ್ಯಾಬ್ ಚಾಲಕನನ್ನು ಬಂಧಿಸಲಾಗಿದೆ

ನವದೆಹಲಿ (ಸೆ. 05): ಯುನೈಟೆಡ್ ಕಿಂಗ್‌ಡಂನ ಮಹಿಳೆ (23)  ಮುಂದೆ ಹಸ್ತಮೈಥುನ ಮಾಡಿಕೊಂಡ ಆರೋಪದ ಮೇಲೆ ದೆಹಲಿಯಲ್ಲಿ ಕ್ಯಾಬ್ ಚಾಲಕನನ್ನು ಬಂಧಿಸಲಾಗಿದೆ. ಸೆಪ್ಟೆಂಬರ್ 2 ರಂದು ಕ್ಯಾಬ್ ಚಾಲಕ ಮಹಿಳೆಯನ್ನು ದಕ್ಷಿಣ ದೆಹಲಿಯ ಹೋಟೆಲ್‌ಗೆ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಲಂಡನ್ ಮೂಲದ ವಕೀಲರಾಗಿರುವ ಮಹಿಳೆ, ಘಟನೆಯ ನಂತರ ದೇಶವನ್ನು ತೊರೆದಿದ್ದಾರೆ. ಕ್ಯಾಬ್ ಚಾಲಕನನ್ನು ಮಖನ್ ಲಾಲ್ ಎಂದು ಗುರುತಿಸಲಾಗಿದೆ. ಆರೋಪಿ ಉತ್ತರ ಪ್ರದೇಶದ ಲಾಲ್‌ಗಂಜ್ ಜಿಲ್ಲೆಯ ನಿವಾಸಿಯಾಗಿದ್ದು ಆರೋಪಿ ಆರು ತಿಂಗಳ ಹಿಂದೆ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಲು ಪ್ರಾರಂಭಿಸಿದ್ದ ಎಂದು ವರದಿಗಳು ತಿಳಿಸಿವೆ. 

ಮಹಿಳೆ ಭಾರತಕ್ಕೆ ಭೇಟಿ ನೀಡಲು ತಮ್ಮ ಸ್ನೇಹಿತನೊಂದಿಗೆ ಬಂದಿದ್ದರು ಮತ್ತು ಇಬ್ಬರೂ ಭಾರತದಲ್ಲಿ ಪ್ರವಾಸವನ್ನು ಯೋಜಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೂರುದಾರ ಮಹಿಳೆ ಮತ್ತು ಆಕೆಯ ಸ್ನೇಹಿತೆ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಕ್ಯಾಬ್ ಬುಕ್ ಮಾಡಿದಾಗ ಈ ಘಟನೆ ನಡೆದಿದೆ. ಅವರನ್ನು ದಕ್ಷಿಣ ದೆಹಲಿಯ ಪಂಚತಾರಾ ಹೋಟೆಲ್‌ಗೆ ಕರೆದೊಯ್ಯುತ್ತಿದ್ದಾಗ ಕ್ಯಾಬ್ ಚಾಲಕ ಕಾರಿನೊಳಗೆ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮಹಿಳೆ ಮತ್ತು ಆಕೆಯ ಸ್ನೇಹಿತೆ ಚಾಲಕನನ್ನು ಹಿಡಿದು ಆಕ್ಷೇಪಿಸಿದ್ದಾರೆ. ಆದರೆ ಚಾಲಕ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಈ ಬೆನ್ನಲ್ಲೇ ದೂರುದಾರ ಮಹಿಳೆ ಪೊಲೀಸರಿಗೆ ಕರೆ ಮಾಡಿ ಮೌಖಿಕ ದೂರು ನೀಡಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾರ್ಖಂಡ್‌ ಬುಡಕಟ್ಟು ಬಾಲಕಿ ರೇಪ್‌, ಕೊಲೆ ಬಳಿಕ ಗರ್ಭಿಣಿ ಎಂಬ ವಿಚಾರ ಬೆಳಕಿಗೆ

ಆರೋಪಿಯನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ ಆದರೆ ಪ್ರಕರಣ ದಾಖಲಿಸಿಕೊಂಡ ಕೆಲವೇ ಗಂಟೆಗಳಲ್ಲಿ ಆಕೆ ಅಲ್ಲಿಂದ ತೆರಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 

"ಮಹಿಳೆ ತಮ್ಮ ರಿಟರ್ನ್ ಫ್ಲೈಟ್ ಟಿಕೆಟನ್ನು ಮುಂಚಿತವಾಗಿ ಕಾಯ್ದಿರಿಸಿದ್ದರು ಎಂದು ತಂಡಕ್ಕೆ ತಿಳಿಸಲಾಗಿದೆ. ಸಾಕ್ಷ್ಯ ಮತ್ತು ಹೇಳಿಕೆ ಆಧರಿಸಿ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

click me!