
ಮಣಿಪಾಲ(ಸೆ.16): ಇಲ್ಲಿನ ಕೆನರಾ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕಿಯಾಗಿದ್ದ ಸೋನಾಲಿ (35) ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಇಲ್ಲಿನ ವಿಭುದಪ್ರಿಯನಗರದ ಫ್ಲಾಟೊಂದರಲ್ಲಿ ವಾಸವಿದ್ದು, 2022ರಲ್ಲಿ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದರು.
ಖಿನ್ನತೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡು ಆಸ್ಪತ್ರೆಗೂ ದಾಖಲಾಗಿದ್ದರು. ಗುರುವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ನಂತರ ರೂಮಿನಲ್ಲಿ ಫ್ಯಾನಿಗೆ ನೇಣುಹಾಕಿಕೊಂಡಿದ್ದಾರೆ.
ತುಮಕೂರು: ಹೆಂಡ್ತಿ ಕಾಟಕ್ಕೆ ತಾಳಲಾರದ ನಮ್ಮ ಮೆಟ್ರೋ ಎಂಜಿನಿಯರ್ ಸಾವಿಗೆ ಶರಣು
ಸಂಜೆ 6 ಗಂಟೆಗೆ ಆಕೆಯ ಹೆತ್ತವರು ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ. ರಾತ್ರಿ 8ಕ್ಕೆ ಪ್ಲಾಟಿಗೆ ಬಂದು ನೋಡಿದಾಗ ಒಳಗಿನಿಂದ ಚಿಲಕ ಹಾಕಿತ್ತು. ಬಲವಂತವಾಗಿ ಬಾಗಿಲು ತೆರೆದಾಗ ಬೆಡ್ ರೂಮಿನಲ್ಲಿ ಫ್ಯಾನಿಗೆ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ