ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ತಡರಾತ್ರಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಂದೇ ಕುಟುಂಬ ಮೂವರು ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಶಿವಮೊಗ್ಗ (ನ.7) : ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ತಡರಾತ್ರಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಂದೇ ಕುಟುಂಬ ಮೂವರು ಮೃತಪಟ್ಟರೆ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹಲುಗಿನಕೊಪ್ಪ ಗ್ರಾಮದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಮಲ್ಲಿಕಾರ್ಜುನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿ ಮಲ್ಲಿಕಾರ್ಜುನ ಮಗಳು ಸೌಜನ್ಯ, ತಾಯಿ ಜ್ಯೋತಿ, ಮಲ್ಲಿಕಾರ್ಜುನ ತಾಯಿ ಗಂಗಮ್ಮ ಅವರೊಂದಿಗೆ ಶಿರಾಳಕೊಪ್ಪದಿಂದ ಹುಲಿಗಿನ ಕೊಪ್ಪದಲ್ಲಿರುವ ತಮ್ಮ ಮನೆಗೆ ಹೊರಟಿದ್ದರು. ಈ ವೇಳೆ ಕಾರು ಹಿರೇಕೆರೂರು ಕಡೆಯಿಂದ ಶಿರಾಳಕೊಪ್ಪದ ಕಡೆಗೆ ತೆರಳುತ್ತಿದ್ದ ಕಾರು, ಬೈಕ್‌ಗೆ ಡಿಕ್ಕಿಯಾಗಿದೆ. ಮುಖಾಮುಖಿ ಡಿಕ್ಕಿಯಾದ. ಭೀಕರ ಅಪಘಾತಕ್ಕೆ ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನ, ಜ್ಯೋತಿ ಹಾಗೂ ಗಂಗಮ್ಮ ಅವರನ್ನು ಕೂಡಲೇ ಶಿಕಾರಿಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಗಂಗಮ್ಮ ಆಸ್ಪತ್ರೆಯಲ್ಲಿ ನಿಧನರಾದರೆ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಜ್ಯೋತಿ ಮೃತಪಟ್ಟಿದ್ದಾಳೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಮಲ್ಲಿಕಾರ್ಜುನ ಅವರ ಸ್ಥಿತಿಯು ಗಂಭೀರವಾಗಿದೆ. ಘಟನೆಯಲ್ಲಿ ಬೈಕು ಸಂಪೂರ್ಣ ನುಜ್ಜುಗುಜ್ಜಾಗಿದ್ದರೆ, ಕಾರಿನ ಮುಂಭಾಗ ಹಾನಿಯಾಗಿದೆ. ಅಪಘಾತಕ್ಕೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಿರಾಳಕೊಪ್ಪ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.
ಮಾಚೇನಹಳ್ಳಿ ಬಳಿ ಲಾರಿ, ಕಾರಿನ ಮಧ್ಯೆ ಭೀಕರ ಅಪಘಾತ: ಇಬ್ಬರ ದುರ್ಮರಣ