
ಕಾರವಾರ, ಉತ್ತರಕನ್ನಡ (ಮೇ.10): ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಆಲೂರು ಎಂಬಲ್ಲಿ ನಡೆದಿದೆ.
ಹಳಿಯಾಳ ತಾಲೂಕಿನ ದುಸಗಿ ನಿವಾಸಿ ಸುನೀಲ್ ಬೋಕ್ನೆಕರ್ (28) ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ. ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುತ್ತಿದ್ದ ಕಾರು ಮತ್ತು ಹಳಿಯಾಳದಿಂದ ದಾಂಡೇಲಿಗೆ ಬರುತ್ತಿದ್ದ ದ್ವಿಚಕ್ರ ವಾಹನ ನಡುವೆ ನಡೆದಿರುವ ಅಪಘಾತ. ಎರಡು ಕಡೆಯಿಂದಲೂ ವೇಗವಾಗಿ ಎದುರುಬದರಾಗಿ ಡಿಕ್ಕಿ. ಕಾರಿಗೆ ಡಿಕ್ಕಿಯಾದ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ವಾಹನ ಸವಾರ ಗಂಭೀರ ಗಾಯ. ಅಪಘಾತದಿಂದಾಗಿ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ವಾಹನ ನಡುರಸ್ತೆಯಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸದ್ಯ ಗಂಭೀರವಾಗಿ ಗಾಯಗೊಂಡಿರುವ ಸುನೀಲ್ ಬೋಕ್ನೇಕರ್ ಎಂಬಾತನನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಕಡೂರು ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ವಿದೇಶಿ ಪ್ರಜೆ ಹುಚ್ಚಾಟ; ಹಿಡಿಯಲು ಓಡೋಡಿ ಪೊಲೀಸರೇ ಸುಸ್ತು!
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಬೈಕ್ ಸವಾರ ಸಾವು
ಚಿಕ್ಕೋಡಿ: ಬೈಕ್ ಹಾಗೂ KSRTC ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಯಭಾಗ ಪಟ್ಟಣದ ಕೋರ್ಟ್ ಬಳಿ ನಡೆದಿದೆ.
ಲಕ್ಕಪ್ಪ ಮುದಕಪ್ಪ ಪಿಡ್ಡಿ (34) ಮೃತ ಬೈಕ್ ಸವಾರ. ಮೃತ ಲಕ್ಕಪ್ಪ ರಾಯಬಾಗ ತಾಲೂಕಿನ ಬ್ಯಾಕೂಡ್ ಗ್ರಾಮದ ನಿವಾಸಿಯಾಗಿದ್ದಾರೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ