Crime News: ಹಿಂದಿನಿಂದ ಬೈಕ್‌ಗೆ ಗುದ್ದಿದ ಕಾರು: ರೈತ ಸಾವು, ಕೊಲೆ ಮಾಡಿರೋ ಶಂಕೆ

Published : Jan 03, 2023, 07:17 AM IST
Crime News: ಹಿಂದಿನಿಂದ ಬೈಕ್‌ಗೆ ಗುದ್ದಿದ ಕಾರು: ರೈತ ಸಾವು, ಕೊಲೆ ಮಾಡಿರೋ ಶಂಕೆ

ಸಾರಾಂಶ

ರೈತನೋರ್ವ ತನ್ನ ಬೈಕಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಗುದ್ದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಆನೇಕಲ್‌ ಠಾಣಾ ವ್ಯಾಪ್ತಿಯ ಸುರಗಜಕ್ಕನಹಳ್ಳಿ ಬಳಿ ನಡೆದಿದೆ.

ಆನೇಕಲ್‌: (ಜ.3) :  ರೈತನೋರ್ವ ತನ್ನ ಬೈಕಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಗುದ್ದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಆನೇಕಲ್‌ ಠಾಣಾ ವ್ಯಾಪ್ತಿಯ ಸುರಗಜಕ್ಕನಹಳ್ಳಿ ಬಳಿ ನಡೆದಿದೆ.

ಕುಂಬಾರನಹಳ್ಳಿ(Kumbaranahalli) ವಾಸಿ ನಂಜುಂಡರೆಡ್ಡಿ(Nanjundareddy) ಮೃತ ರೈತ. ಜಿಗಣಿ ರಸ್ತೆ(jigani road)ಯಿಂದ ಆನೇಕಲ್‌ ಕಡೆಗೆ ಬರುತ್ತಿದ್ದರು. ಬೈಕಿಗೆ ಡಿಕ್ಕಿ ಹೊಡೆದ ಕಾರು(Road accident) ನಿಲ್ಲಿಸದೇ ಅದೇ ವೇಗದಲ್ಲಿ ಮುಂದೆ ಸಾಗಿದ್ದು, ಕಾರಿನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ವೃತ್ತ ನಿರೀಕ್ಷಕ ಚಂದ್ರಪ್ಪ ತಿಳಿಸಿದ್ದಾರೆ.

ಸ್ಥಳೀಯವಾಗಿ ಲಭ್ಯವಾದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಗಮನಿಸಿದರೆ ಅಪಘಾತ ಎಂದು ಕಂಡು ಬಂದರೂ ಪ್ರಾಥಮಿಕ ತನಿಖೆಯಲ್ಲಿ ಕೊಲೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಶವವನ್ನು ಆನೇಕಲ್‌ ಸರ್ಕಾರಿ ಆಸ್ಪತ್ರೆಗೆ ತಂದಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

KOPPALA: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಗೊಬ್ಬರ ವ್ಯಾಪಾರಿ ಆತ್ಮಹತ್ಯೆ

ಹೆಡ್‌ಫೋನ್ ವಿಚಾರಕ್ಕೆ ಕೊಲೆ:

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ(New year celebration) ವೇಳೆ ಮದ್ಯದ ಅಮಲಿನಲ್ಲಿ ಹೆಡ್‌ಫೋನ್‌(Headphone) ವಿಚಾರಕ್ಕೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪರಪ್ಪನ ಅಗ್ರಹಾರ(parappana agrahar) ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು(Tamilnadu) ಮೂಲದ ಕಾರ್ತಿಕ್‌(Kartik) (27) ಕೊಲೆಯಾದ ದುರ್ದೈವಿ. ಈ ಸಂಬಂಧ ಆರೋಪಿಗಳಾದ ರಜನೀಶ್‌ ಮತ್ತು ರವಿ ಎಂಬುವವರನ್ನು ಬಂಧಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕಾರ್ತಿಕ್‌, ರಜನೀಶ್‌ ಮತ್ತು ರವಿ ಸ್ನೇಹಿತರು. ನಗರದ ದೊಡ್ಡನಾಗಮಂಗಲದ ಬಾಲಾಜಿ ಲೇಔಟ್‌ನಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಪೇಟಿಂಗ್‌ ಕೆಲಸ ಮಾಡುತ್ತಿದ್ದರು. ಹೀಗಾಗಿ ಆ ನಿರ್ಮಾಣ ಹಂತದ ಕಟ್ಟದಲ್ಲೇ ತಂಗಿದ್ದರು.

ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ರಜನೀಶ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಡಿ.31ರ ರಾತ್ರಿ ನಿರ್ಮಾಣ ಹಂತದ ಕಟ್ಟಡದಲ್ಲೇ ಕಾರ್ತಿಕ್‌, ರವಿ ಹಾಗೂ ಇತರರು ಪಾರ್ಟಿ ಮಾಡಿದ್ದಾರೆ. ಈ ವೇಳೆ ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ. ಆಗ ರಜನೀಶ್‌ನ ಹೆಡ್‌ಪೋನನ್ನು ಕಾರ್ತಿಕ್‌ ತೆಗೆದುಕೊಂಡಿದ್ದಾನೆ. ಅದೇ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ. ಈ ವೇಳೆ ರಜನೀಶ್‌ ಸಹಾಯಕ್ಕೆ ಬಂದ ರವಿ ಹಾಗೂ ಇತರರು ಕಾರ್ತಿಕ್‌ ಮೇಲೆ ಹಲ್ಲೆ ನಡೆಸಿದ್ದಾರೆ.

Bengaluru Crime: ಸೋದರ ಮಾವನಿಂದಲೇ ಪ್ರೆಸಿಡೆನ್ಸಿ ಕಾಲೇಜು ವಿದ್ಯಾರ್ಥಿನಿ ಕೊಲೆ

ಬಳಿಕ ಎಲ್ಲರೂ ಮಲಗಲು ತೆರಳಿದ್ದಾರೆ. ಅದರಂತೆ ಹಲ್ಲೆಗೆ ಒಳಗಾಗಿದ್ದ ಕಾರ್ತಿಕ್‌ ಮಲಗಲು ತೆರಳಿದ್ದ. ಬೆಳಗ್ಗೆ 9 ಗಂಟೆಯಾದರೂ ಎಚ್ಚರವಾಗಿಲ್ಲ. ಹೀಗಾಗಿ ಕಾರ್ಮಿಕರು ಕಾರ್ತಿಕ್‌ನನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಎಷ್ಟೇ ಕೂಗಿದರೂ ಕಾರ್ತಿಕ್‌ ಎಚ್ಚರಗೊಂಡಿಲ್ಲ. ಹೀಗಾಗಿ ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಕಾರ್ತಿಕ್‌ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ಕಾರ್ತಿಕ್‌ನ ಸಾವಿನ ಸುದ್ದಿ ತಿಳಿದು ಕೆಲವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ