ಬೇಸಿಗೆ ಬಿಸಿಲಿಗೆ ಕಾರಿನ ಟೈರ್‌ ಬ್ಲಾಸ್ಟ್‌ : ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ

By Sathish Kumar KH  |  First Published Apr 4, 2023, 5:18 PM IST

ವಿಜಯಪುರ ಜಿಲ್ಲೆಯ ಸಿಂಧಗಿ ಬಳಿ ಕಾರಿನ ಟೈರ್‌ ಬ್ಲಾಸ್ಟ್‌ ಆಗಿ ಪಲ್ಟಿಯಾಗಿದ್ದು, ಒಂದೇ ಕುಟುಂಬದ ನಾಲ್ವರು ಸದಸ್ಯರು ಗಂಭೀರ ಗಾಯಗೊಂಡಿದ್ದಾರೆ.


ವಿಜಯಪುರ (ಏ.04): ರಾಜ್ಯದಲ್ಲಿ ಬೇಸಿಗೆ ಬಿಸಿಲು ಆರಂಭವಾಗುತ್ತಿದ್ದಂತೆಯೇ ವಿವಿಧೆಡೆ ವಾಹನಗಳ ಟೈರ್‌ ಬ್ಲಾಸ್ಟ್‌ ಆಗಿ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂದು ಮಧ್ಯಾಹ್ನ ವಿಜಯಪುರದ ಇಂಧಗಿ ಬಳಿಯ ರಾಂಪುರ ಗ್ರಾಮದ ಬಳಿ ಕಾರಿನ ಟೈರ್‌ ಬ್ಲಾಸ್ಟ್‌ ಆಗಿ ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಕಾರಿನೊಳಗಿದ್ದ ನಾಲ್ವರಿಗೂ ಗಂಭೀರ ಗಾಯವಾಗಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ್ ಗ್ರಾಮದ ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದ ನಿಂಗಪ್ಪ ಕುಡಕಿ (75),  ಪಾರ್ವತಿ ಕುಡಕಿ (60), ಸಿದ್ಧಾರೂಢ ಕುಡುಕಿ(20) ಹಾಗೂ ಅಯ್ಯಪ್ಪ ಕುಡಕಿ (36) ಸೇರಿ ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಇನ್ನು ಕಾರು ಟೈರ್‌ ಬ್ಲಾಸ್ಟ್‌ ಆಗುತ್ತಿದ್ದಂತೆಯೇ ರಸ್ತೆಯಲ್ಲಿ ಎರಡು ಪಲ್ಟಿಯಾಗಿ ಪಕ್ಕದಲ್ಲಿ ಇದ್ದ ಹಳ್ಳಕ್ಕೆ ಬಿದ್ದಿದೆ. ಆದರೆ, ಕಾರಿನಲ್ಲಿ ಏರ್‌ಬ್ಯಾಗ್‌ ತೆರೆದುಕೊಳ್ಳದ ಹಿನ್ನೆಲೆಯಲ್ಲಿ ಎಲ್ಲರಿಗೂ ಕೂಡ ಗಂಭೀರ ಗಾಯವಾಗಿದ್ದು, ವೃದ್ಧ ನಿಂಗಪ್ಪ ಕುಡುಕಿ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. 

Latest Videos

undefined

ಬೆಂಗಳೂರು ನೈಸ್‌ ರಸ್ತೆಯಲ್ಲಿ ಬೈಕ್‌ ಟೈರ್‌ ಬಸ್ಟ್‌: ತಡೆಗೋಡೆಗೆ ಗುದ್ದಿ ಇಂಜಿನಿಯರ್‌ ಸಾವು

ಗಾಯಾಳು ಆಸ್ಪತ್ರೆಗೆ ದಾಖಲು: ಸಿಂಧಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿದ ಕೂಡಲೇ ಸ್ಥಳ ಪರಿಶೀಲನೆ ಮಾಡಿದ್ದಾರೆ. ನಂತರ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ರಕ್ಷಣೆ ಮಾಡಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. 

ಬೇಸಿಗೆಯಲ್ಲಿ ವಾಹನಗಳ ಟೈರ್‌ ಬಗ್ಗೆ ಎಚ್ಚರವಿರಲಿ: ಈ ಬಾರಿ ಬೇಸಿಗೆ ಹಾಗೂ ಉಷ್ಣ ಹವೆಯ ಪ್ರಮಾಣ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಬೈಕ್‌, ಕಾರು, ಬಸ್‌ ಹಾಗೂ ಇತರೆ ಯಾವುದೇ ವಾಹನಗಳಲ್ಲಿ ದೂರದ ಪ್ರಯಾಣ ಮಾಡುವ ಮುನ್ನ ನಿಮ್ಮ ವಾಹನಗಳ ಟೈರ್‌ ಬಗ್ಗೆಯೂ ಸ್ವಲ್ಪ ಗಮನಹರಿಸಿದರೆ ಒಳಿತು. ಇಲ್ಲವಾದಲ್ಲಿ ಇಂತಹ ಅಪಘಾತಗಳು ಸಂಭವಿಸಿ ಜೀವಕ್ಕೆ ಅಪಾಯವಾಗಬಹುದು. 

ವಾಹನ ಟೈರ್ ಸ್ಫೋಟಕ್ಕೆ ದೇವರು ಕಾರಣವೆಂದ ವಿಮಾ ಕಂಪನಿಗೆ ಬಾಂಬೆ ಹೈಕೋರ್ಟ್ ತರಾಟೆ, ಪರಿಹಾರ ಪಾವತಿಸಲು ಸೂಚನೆ

ಸ್ಕೂಟರ್‌ ಟೈರ್‌ ಬ್ಲಾಸ್ಟ್‌ ಆಗಿ ಇಂಜಿನಿಯರ್‌ ಸಾವು: ಬೆಂಗಳೂರಿನ ಹೊಸಕೆರೆಹಳ್ಳಿ ಬಳಿಯ ನೈಸ್‌ ರಸ್ತೆಯಲ್ಲಿ ಸ್ಕೂಟರ್ ಟೈರ್‌ ಬಸ್ಟ್‌ ಆಗಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಾಪ್ಟ್‌ವೇರ್‌ ಇಂಜಿನಿಯರ್‌ ಸುಲೋಚನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೋರಮಂಗಲ‌ದಿಂದ ಹೊಸಕೆರೆಹಳ್ಳಿ ಕಡೆಗೆ ಸುಲೋಚನಾ ಮತ್ತು ಆಕೆಯ ಸ್ನೇಹಿತ ಆನಂದ್‌ ಹೋಗುತ್ತಿದ್ದರು. ಈ ವೇಳೆ ಸ್ನೇಹಿತ ಆನಂದ್ ಪೂರ್ಣ ಹೆಲ್ಮೇಟ್ ಧರಿಸಿದ್ದು, ಸುಲೋಚನಾ ಅರ್ಧ ಹೆಲ್ಮೆಟ್ ಧರಿಸಿದ್ದರು. ಇನ್ನು ನೈಸ್‌ ರಸ್ತೆಯಲ್ಲಿ ವೇಗವಾಗಿ ಹೋಗುವಾಗ ಸ್ಕೂಟರ್‌ನ ಟೈರ್‌ ಸ್ಪೋಟಗೊಂಡು (ಟೈರ್‌ ಬಸ್ಟ್‌) ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಹೋಗಿ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಇನ್ನು ರಸ್ತೆಗೆ ಬಿದ್ದ ರಭಸಕ್ಕೆ ಇಬ್ಬರಿಗೂ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರ ಪೆಟ್ಟಾಗಿತ್ತು. ಇಬ್ಬರೂ ಗಾಯಾಳುಗಳು ತೀವ್ರ ರಕ್ತಸ್ರಾವ ಉಂಟಾಗಿ ರಸ್ತೆ ಬದಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದು ನರಳುತ್ತಿದ್ದರು. 

click me!