
ಗುಂಡ್ಲುಪೇಟೆ(ನ.03): ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿವಪುರ ಗ್ರಾಮದ ಕಲ್ಕಟ್ಟೆ ಕೆರೆಯಲ್ಲಿ ನಡೆದಿದೆ. ಪಟ್ಟಣದ ನಿವಾಸಿ ಕಾರ್ಪೆಂಟರ್ ಚಿನ್ನಸ್ವಾಮಿಚಾರಿ(50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಈ ಸಂಬಂಧ ಮೃತರ ಪುತ್ರ ಗುಂಡ್ಲುಪೇಟೆ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ ನ.1 ರಂದು ಬೆಳಗ್ಗೆ ಕೆಲಸಕ್ಕೆ ಹೋದ ಚಿನ್ನಸ್ವಾಮಿಚಾರಿ ರಾತ್ರಿಯಾದರೂ ಮನೆಗೆ ಬರಲಿಲ್ಲ. ನ.2 ರ ಬೆಳಗ್ಗೆ ಕಲ್ಕಟ್ಟೆ ಕೆರೆಯ ಬಳಿ ಚಿನ್ನಸ್ವಾಮಿಚಾರಿ ಚಪ್ಪಲಿ ಸಿಕ್ಕ ನಂತರ ಸಂಶಯಗೊಂಡ ಪುತ್ರ ಅಗ್ನಿಶಾಮಕ ದಳಕ್ಕೆ ವಿಚಾರ ತಿಳಿಸಿದ್ದಾರೆ.
ಬಟ್ಟ ಬಯಲಿನಲ್ಲಿ ಮಹಿಳೆಯ ಸೀರೆ ಹಿಡಿದೆಳೆದ ಪರಪುರುಷ: ಮನನೊಂದು ಆತ್ಮಹತ್ಯೆಗೆ ಶರಣಾದ ಗೃಹಿಣಿ
ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದಾಗ ಚಿನ್ನಸ್ವಾಮಿ ಶವ ಪತ್ತೆಯಾಗಿದೆ. ಚಿನ್ನಸ್ವಾಮಿ ಚಾರಿ ಸಾವಿನ ಬಗ್ಗೆ ಅನುಮಾನವಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ