
ಬೆಂಗಳೂರು(ಜು.12): ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ನಟ ಸುದೀಪ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ಬರಹಗಾರ ಅಹೋರಾತ್ರ ಹಾಗೂ ಚರಣ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಹಲಸೂರು ಗೇಟ್ ಉಪ ವಿಭಾಗದ ಎಸಿಪಿ ಅವರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೋಮವಾರ ದೂರು ಸಲ್ಲಿಸಿದೆ.
ಕಾರ್ಪೋರೇಷನ್ ವೃತ್ತ ಸಮೀಪದ ಹಲಸೂರು ಗೇಟ್ ಕಚೇರಿಗೆ ಭೇಟಿ ನೀಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ನೇತೃತ್ವದ ತಂಡವು, ಸುದೀಪ್ ಅವರ ವಿರುದ್ಧ ನಿಂದಿಸಿರುವ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆಸಬೇಕು ಎಂದು ಎಸಿಪಿ ವಿ.ನಾರಾಯಣಸ್ವಾಮಿ ಅವರಿಗೆ ವಿನಂತಿಸಿದರು.
ಬೆಂಗ್ಳೂರು: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ, 8 ಮಂದಿ ನೊಂದ ಯುವತಿಯರ ರಕ್ಷಣೆ
ಭಾರತೀಯ ಚಲನಚಿತ್ರ ರಂಗದ ಹೆಸರಾಂತ ನಟರಾಗಿರುವ ಸುದೀಪ್ ಅವರ ಬಗ್ಗೆ ಆಹೋರಾತ್ರ ಹಾಗೂ ಚರಣ್ ತುಚ್ಛವಾದ ಭಾಷೆಯಲ್ಲಿ ನಿಂದಿಸಿದ್ದಾರೆ. ಈ ಮೂಲಕ ಕನ್ನಡ ಚಲನಚಿತ್ರರಂಗ ಹಾಗೂ ಸುದೀಪ್ ಅವರ ಘನತೆ ಮತ್ತು ಗೌರವಕ್ಕೆ ಚ್ಯುತಿ ತರುವ ಹೇಳಿಕೆ ನೀಡಿರುವುದು ಬೇಸರ ತಂದಿದೆ. ಅಲ್ಲದೆ ಕಲಾವಿದರ ಬಗ್ಗೆ ಸಾರ್ವಜನಿಕರಲ್ಲಿ ಇಲ್ಲ ಸಲ್ಲದ ಗೊಂದಲಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಇಬ್ಬರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಬೇಕು ಎಂದು ಬಾ.ಮಾ.ಹರೀಶ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ‘ಕನ್ನಡಪ್ರಭ’ಕ್ಕೆ ಪ್ರತಿಕ್ರಿಯಿಸಿ ಎಸಿಪಿ ನಾರಾಯಣಸ್ವಾಮಿ ಅವರು, ನಟ ಸುದೀಪ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ದೂರಿನನ್ವಯ ಗಂಭೀರವಲ್ಲದ ಪ್ರಕರಣ (ಎನ್‌ಸಿ) ಎಂದು ನಮೂದಿಸಲಾಗಿದೆ. ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ