
ತುಮಕೂರು(ಅ.15): ಲುಲು ಶಾಪಿಂಗ್ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಫೋಟೋ ಜೊತೆಗೆ ಪೋಸ್ಟ್ ಹಂಚಿಕೊಂಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ಹಿನ್ನೆಲೆಯಲ್ಲಿ ಜನರ ಭಾವನೆಗಳನ್ನು ಕೆರಳಿಸುವ ಆರೋಪದ ಮೇರೆಗೆ ಐಪಿಸಿ 153 (ಬಿ) ಅಡಿ ಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಾಲ್‌ನಲ್ಲಿ ಭಾರತದ ತ್ರಿವರ್ಣಕ್ಕಿಂತ ಪಾಕಿಸ್ತಾನದ ದೊಡ್ಡ ಧ್ವಜ, ವೈರಲ್ ಚಿತ್ರಕ್ಕೆ ಲುಲು ಮಾಲ್‌ನಿಂದ ಸ್ಪಷ್ಟನೆ!
ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನುವ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ನವರಿಗೆ? @ಡಿ.ಕೆ. ಶಿವಕುಮಾರ್ #ಬಾಯ್ಕಾಟ್ ಲುಲುಮಾಲ್’ ಎಂಬ ಪೋಸ್ಟ್ ಅನ್ನು ಶಕುಂತಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇರೆಗೆ ಶಂಕುತಲಾ ನಟರಾಜ್ ಅವರು ಬೆಂಗಳೂರು ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ