ರಾಮನಗರ: ಜಾಲತಾಣದಲ್ಲಿ ಖಾಸಗಿ ಕ್ಷಣಗಳ ವಿಡಿಯೋ ಹಾಕಿದವನ ವಿರುದ್ಧ ಕೇಸ್‌

By Kannadaprabha News  |  First Published May 16, 2024, 12:09 PM IST

ನನ್ನನ್ನು ಬೆದರಿಸಿ 2 ವರ್ಷಗಳಿಂದ ನನ್ನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೇ, ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಇದರಿಂದ ನನಗೆ ಮತ್ತು ಪತಿ, ಮಕ್ಕಳ ಮರ್ಯಾದೆ ಹೋಗಿದ್ದು, ಕುಟುಂಬದವರಿಗೆ ಮಾನಸಿಕವಾಗಿ ನೋವುಂಟಾಗಿದೆ. ನೀನು ಕರೆದಾಗಲೆಲ್ಲ ಸ್ಪಂದಿಸದಿದ್ದರೆ ಉಳಿದ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ ಮಹಿಳೆ 
 


ರಾಮನಗರ(ಮೇ.16):  ಪತಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ ಆತನ ಪತ್ನಿ ಜೊತೆ ಬಲವಂತವಾಗಿ ವಿಡಿಯೋ ಮಾಡಿಕೊಂಡಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ವ್ಯಕ್ತಿ ವಿರುದ್ಧ ಮಹಿಳೆಯೊಬ್ಬರು ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಲೂಕಿನ ದೊಡ್ಡಮಣ್ಣುಗುಡ್ಡೆ ನಿವಾಸಿ ರಾಜೇಶ್ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. 14 ವರ್ಷಗಳ ಹಿಂದೆ ತಾನು ವಿವಾಹವಾಗಿದ್ದು, ಪತಿ, ಇಬ್ಬರು ಮಕ್ಕಳಿದ್ದಾರೆ. ನನ್ನನ್ನು ಬೆದರಿಸಿ 2 ವರ್ಷಗಳಿಂದ ನನ್ನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೇ, ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಇದರಿಂದ ನನಗೆ ಮತ್ತು ಪತಿ, ಮಕ್ಕಳ ಮರ್ಯಾದೆ ಹೋಗಿದ್ದು, ಕುಟುಂಬದವರಿಗೆ ಮಾನಸಿಕವಾಗಿ ನೋವುಂಟಾಗಿದೆ. ನೀನು ಕರೆದಾಗಲೆಲ್ಲ ಸ್ಪಂದಿಸದಿದ್ದರೆ ಉಳಿದ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Tap to resize

Latest Videos

ರಾಮನಗರ: ಖಾಸಗಿ ಕ್ಷಣದ ಫೋಟೋ ತೋರಿಸಿ ವೈದ್ಯನಿಂದ ಮಹಿಳೆಗೆ ಬ್ಲ್ಯಾಕ್‌ಮೇಲ್‌..!

ಈ ವಿಚಾರವಾಗಿ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದಾಗ ಆತನಿಂದ ಮುಚ್ಚಳಿಕೆ ಬರೆಸಿಕೊಂಡು ಬುದ್ಧಿ ಹೇಳಿ ಕಳುಹಿಸಿದ್ದರು. ಈಗ ಮತ್ತೆ ಪೀಡಿಸುತ್ತಿದ್ದು, ಆತನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾಳೆ.

click me!