ಹಿರೇಕೇರೂರು ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕುಟುಂಬ ರಾಜಕಾರಣದ ವಿರುದ್ಧ ನಾಲಿಗೆ ಹರಿಬಿಟ್ಟ ಆರೋಪದ ಹಿನ್ನೆಲೆಯಲ್ಲಿ ಚಿತ್ರನಟಿ ಶೃತಿ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ.
ಹಾವೇರಿ (ಏ.12): ಕಳೆದ ವಾರ ಹಾವೇರಿ ಜಿಲ್ಲೆಯ ಹಿರೇಕೇರೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕುಟುಂಬ ರಾಜಕಾರಣದ ವಿರುದ್ಧ ನಾಲಿಗೆ ಹರಿಬಿಟ್ಟ ಆರೋಪದ ಹಿನ್ನೆಲೆಯಲ್ಲಿ ಚಿತ್ರನಟಿ ಶೃತಿ ವಿರುದ್ಧ ಪೊಲೀಸ್ ಕೇಸ್ ದಾಖಲಿಸಲಾಗಿದೆ.
ಕಳೆದ ವಾರದ ಹಿಂದೆ ಹಿರೆಕೇರೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಭಾಷಣ ಮಾಡಿದ್ದ ವೇಳೆ ನಟಿ ಶೃತಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಲಂ 505 ರಡಿ ಹಿರೆಕೇರೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ನಟ ಹಾಗೂ ಮಾಜಿ ಸಚಿವ ಬಿ ಸಿ ಪಾಟೀಲ್ ಪರ ಪ್ರಚಾರಕ್ಕೆ ಆಗಮಿಸಿದ್ದ ನಟಿ ಶೃತಿ ಪಕ್ಷ ಪಕ್ಷಗಳ ನಡುವೆ ವೈರತ್ವ, ದ್ವೇಷ ಹಾಗೂ ಭಯ ಭೀತಿಯನ್ನುಂಟು ಮಾಡಿದ ಅಪರಾಧವನ್ನು ಎಸಗಿದ್ದಾರೆ ಎಂದು ಕೇಸ್ ದಾಖಲಿಸಲಾಗಿದೆ.
undefined
ಸುಳ್ಯ ಶಾಸಕ ಎಸ್. ಅಂಗಾರ ರಾಜಕೀಯ ನಿವೃತ್ತಿ: ಬಿಜೆಪಿ ಅಭ್ಯರ್ಥಿಗೂ ಬೆಂಬಲಿಸಲ್ಲ
ರಾಜಕೀಯದಲ್ಲಿ ವಂಶದ ಬಗ್ಗೆ ಹೇಳಿಕೆ: ಹಿರೆಕೇರೂರು ನೋಡಲ್ ಅಧಿಕಾರಿ ಪಂಪಾಪತಿ ಎಂಬುವವರಿಂದ ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮೇಜರ್ ಆಗಿ ರಾಜ್ಯದಲ್ಲಿ ಮೂರು ಪಕ್ಷಗಳಿವೆ. ಯಾವುದೇ ಬೇರೆ ಪಕ್ಷದ ಬಗ್ಗೆ ನಾನು ಜಾಸ್ತಿ ಮಾತನಾಡಲ್ಲ. ಆದರೆ ಒಂದೆ ಮಾತಿನಲ್ಲಿ ಹೇಳಿ ಮುಗಿಸಿಬಿಡ್ತೇನಿ. ನಿಮ್ಮ ವಂಶ ಬಿಟ್ಟು ಬೇರೆಯವರ ವಂಶ ಅಭಿವೃದ್ದಿ ಆಗಬೇಕಾದರೆ ಜೆಡಿಎಸ್‌ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರ ದೇಶದ ವಂಶ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್‌ಗೆ ಮತ ಹಾಕಿ. ಇನ್ನು ನಿಮ್ಮ ವಂಶದ ಜೊತೆಗೆ ದೇಶದ ಅಭಿವೃದ್ಧಿಯೂ ಆಗಬೇಕೆಂದರೆ ಬಿಜೆಪಿಗೆ ಮತ ಹಾಕಿ ಎಂದು ಹೇಳುವ ಮೂಲಕ ಎಲ್ಲ ಪಕ್ಷಗಳ ನಡುವೆ ವಿವಾದವನ್ನು ಸೃಷ್ಟಿಸಿದ್ದರು. ಈ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಕುಟುಂಬ ರಾಜಕಾರಣ ಕುರಿತು ಅಪಹಾಸ್ಯ ಮಾಡಿದ್ದರು.
ರಾಣೇಬೆನ್ನೂರು ಅಭ್ಯರ್ಥಿಯಿಂದ ದೀರ್ಘದಂಡ ನಮಸ್ಕಾರ: ಅಬ್ಬಾ ಟಿಕೇಟ್ ಸಿಕ್ತು ಅಂತ ಫುಲ್ ಖುಷಿಯಿಂದ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಮನೆ ದೇವರು ಕೊಟ್ಟೂರಿನ ಶ್ರೀ ಗುರುಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಧೀರ್ಘ ದಂಡ ನಮಸ್ಕಾರ ಹಾಕಿದ್ದಾರೆ. ಕುಟುಂಬ ಸಮೇತ ತೆರಳಿ ಶ್ರೀ ಗುರು ಕೊಟ್ಟರು ಬಸವೇಶ್ವರ ಸ್ವಾಮಿ ದರ್ಶನ ಪಡೆದ ಅರುಣಕುಮಾರ ಅವರು ಮೊದಲ ಪಟ್ಟಿಯಲ್ಲಿ ಹೆಸರು ಬರುವ ಮೂಲಕ ಅದೃಷ್ಟ ಒಲಿದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಆರ್. ಅಶೋಕ್ ಸ್ಪರ್ಧೆಯ ಎರಡೂ ಕ್ಷೇತ್ರದಲ್ಲಿ ಡಿಕೆ ಬ್ರದರ್ಸ್ ಎದುರಾಳಿ: ಪದ್ಮನಾಭನಗರದಿಂದ ಡಿ.ಕೆ. ಸುರೇಶ್ ಕಣಕ್ಕೆ!
ನಿರೀಕ್ಷೆಯಂತೆ ಟಿಕೆಟ್ ಹಂಚಿಕೆ- ಗೊಂದಲಕ್ಕೆ ತೆರೆ : ಸಿಎಂ ಬೊಮ್ಮಾಯಿ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ದೆ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ವದಂತಿಗಳಿಗೆ ತೆರೆ ಎಳೆದಿದೆ. ಸಿಎಂ ಬೊಮ್ಮಾಯಿ ಅವರು ಕ್ಷೇತ್ರ ಬದಲಿಸುತ್ತಾರೆ ಎಂಬ ವದಂತಿಗೆ ಈಗ ತೆರೆ ಬಿದ್ದಿದೆ. ರಾಣೆಬೆನ್ನೂರು ಕ್ಷೇತ್ರದಲ್ಲಿ ಅರುಣಕುಮಾರ ಪೂಜಾರ್ ಅವರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ವದಂತಿ ದಟ್ಟವಾಗಿ ಹರಡಿತ್ತು. ಶಿಗ್ಗಾವಿಯಲ್ಲಿ ಮೊನ್ನೆ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದ ವೇದಿಕೆಯಲ್ಲೇ ಶಾಸಕರ ಪತ್ನಿ ಮಂಗಳಗೌರಿ ಅವರು ಸಿಎಂ ಬೊಮ್ಮಾಯಿ ಅವರಲ್ಲಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಹಿರೇಕೆರೂರು ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿದೆ. ಈಗಾಗಲೇ ಅವರು ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.