
ಭಟ್ಕಳ (ಸೆ.12): ಹಲವು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಉತ್ತರ ಕರ್ನಾಟಕ ಜಿಲ್ಲೆಯ ಭಟ್ಕಳ ಪಟ್ಟಣದ ಮುಗ್ದುಮ್ ಕಾಲನಿಯ ಗುಡ್ಡದ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಪತ್ತೆ ಆಗಿವೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹಿಂದೂ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಈ ಸ್ಥಳದಲ್ಲಿ ಹಲವು ದಿನಗಳಿಂದ ಜಾನುವಾರು ಹತ್ಯೆ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಹಿಂದೂ ಸಂಘಟನೆಯ ಯುವಕರು ಮೂಳೆಗಳ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಖಲೀಫಾ, ಘಜ್ವಾ ಉಗ್ರ ಜಾಲ ಬಯಲು! ದೇಶವನ್ನು ಖಿಲಾಫತ್ ಮಾಡಲು ಹೊಂಚು ಹಾಕಿದ್ದ ಐವರ ಬಂಧನ
ಪ್ರಕರಣ ಮುಚ್ಚಿಹಾಕಲು ಯತ್ನ?
ಗುಡ್ಡದಲ್ಲಿ ಜಾನುವಾರುಗಳ ಮೂಳೆಗಳು ಮತ್ತು ಅಸ್ಥಿಪಂಜರದ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಸ್ಥಳದಲ್ಲಿ ಜೆಸಿಬಿ ಯಂತ್ರದ ಮೂಲಕ ಸ್ವಚ್ಛಗೊಳಿಸಿ ಘಟನೆಯನ್ನು ಸಂಪೂರ್ಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದು ನಿವೃತ್ತ ಸೈನಿಕ ಮತ್ತು ಬಿಜೆಪಿ ಮುಖಂಡ ಶ್ರೀಕಾಂತ ನಾಯ್ಕ ಆಸರಕೇರಿ ಆರೋಪಿಸಿದ್ದಾರೆ. ಈ ಪ್ರಕರಣವನ್ನು ಗಂಭೀವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ