ಬೆಂಗಳೂರು, [ಫೆ.15]: ಭಾರೀ ಸಂಖ್ಯೆಯಲ್ಲಿ ಸಂಗ್ರಹಿಸಲಾಗಿದ್ದ ಅತ್ಯಾಧುನಿಕ, ಅತ್ಯಂತ ಮಾರಕ ಶಸ್ತ್ರಾಸ್ತ್ರಗಳನ್ನು ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ನಗರದ ಸುದ್ದುಗುಂಟೆಪಾಳ್ಯದ ಮನೆಯೊಂದರಲ್ಲಿ ಸಂಗ್ರಹಿಸಿಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಜುನೈದ್, ಮಹಮ್ಮದ್ ತಬ್ರೇಜ್ ಅಹಮ್ಮದ್ ಎಂಬುವರನ್ನು ಬಂಧಿಸಲಾಗಿದೆ.
CCB ಯಿಂದ ಅರೆಸ್ಟ್ ಆಗಿದ್ದ ಉಗ್ರರು ಇಂದು NIA ವಶಕ್ಕೆ
ಒಂದಲ್ಲ ಎರಡಲ್ಲ ಬರೋಬ್ಬರಿ 28 ಗನ್ ಗಳು ಸಿಸಿಬಿ ಪೊಲೀಸರಿಗೆ ಸಿಕ್ಕಿವೆ. ಈ ಪೈಕಿ 11 ಪಿಸ್ತೂಲು, 7 ಸ್ಟನ್ ಗನ್ ಗಳಿದ್ದು, 303 ಮಾದರಿಯ 10 ರೈಫಲ್ , 76 ಡಮ್ಮಿ ಬುಲೆಟ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಒಂದೊಂದು ಗನ್ 25ರಿಂದ 30 ಸಾವಿರ ರೂಪಾಯಿ ಬೆಲೆ ಬಾಳುತ್ತವೆ. ವಶಕ್ಕೆ ಪಡೆದ ಗನ್ ಗಳ ಬೆಲೆ ಒಟ್ಟಾರೆ 8 ಲಕ್ಷದ 40 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಇಷ್ಟು ದೊಡ್ಡ ಮಟ್ಟದ ಶಸ್ತ್ರಾಸ್ತ್ರಗಳು ಸಂಗ್ರಹಿಸಿರುವ ಹಿಂದೆ ಭಯೋತ್ಪಾದನಾ ಕೃತ್ಯ ನಡೆಸುವ ಉದ್ದೇಶ ಇರುವ ಶಂಕೆ ಇದ್ಯಾ ಎನ್ನುವ ಅನುಮಾಗಳ ಹುಟ್ಟಿಕೊಂಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ