
ಬೆಂಗಳೂರು(ಜು.13): ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಕ್ರಮ ಭೂ ವ್ಯವಹಾರ ಪ್ರಕರಣದಲ್ಲಿ ಕೆಲ ಆರೋಪಿಗಳ ಹೆಸರು ಕೈಬಿಡಲು ₹55 ಲಕ್ಷ ಲಂಚ ಪಡೆದ ಆರೋಪದಡಿ ಸಿಸಿಬಿ ಹೆಡ್‌ಕಾಸ್ಟೇಬಲ್‌ವೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿ ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ (ಅಪರಾಧ) ಡಾ। ಚಂದ್ರಗುಪ್ತ ಆದೇಶಿಸಿದ್ದಾರೆ.
ಹೆಡ್ ಕಾನ್‌ಸ್ಟೇಬಲ್ ಯತೀಶ್ ಅಮಾನತುಗೊಂಡಿದ್ದು, ಈ ಬಗ್ಗೆ ಕರ್ತವ್ಯಲೋಪದ ಆರೋಪ ಸಂಬಂಧ ಸಿಸಿಬಿ ಡಿಸಿಪಿ ನೀಡಿದ ವರದಿ ಆಧರಿಸಿ ಹೆಚ್ಚುವರಿ ಆಯುಕ್ತರು ಆಮಾನತುಗೊಳಿಸಿದ್ದಾರೆ. ಈ ಬಗ್ಗೆ ಇಲಾಖಾ ಮಟ್ಟದ ವಿಚಾರಣೆಗೆ ಸಹ ಅವರು ಸೂಚಿಸಿದ್ದಾರೆ.
ಗುಜರಾತ್ ಅಧಿಕಾರಿಗಳಿಂದ ಲಂಚ ಪಾವತಿಗೂ ಇಎಂಐ ವ್ಯವಸ್ಥೆ ಜಾರಿ!
ಎರಡು ವರ್ಷಗಳ ಹಿಂದೆ ಅಕ್ರಮ ಭೂ ಅವ್ಯವಹಾರ ಸಂಬಂಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಬಿಡಿಎ ಅಧಿಕಾರಿಗಳು ಹಾಗೂ ದಲ್ಲಾಳಿಗಳ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣದ ತನಿಖೆ ಸಿಸಿಬಿ ನಡೆಸಿತ್ತು. ಆ ಪ್ರಕರಣದ ಕೆಲ ಆರೋಪಿಗಳಿಂದ ಹಣ ಪಡೆದು ದೋಷಾರೋಪ ಪಟ್ಟಿಯಲ್ಲಿ ಹೆಸರು ಕೈ ಬಿಡಲು ಯತೀಶ್ ಯತ್ನಿಸಿದ್ದ ಆರೋಪ ಕೇಳಿ ಬಂದಿತ್ತು. ಈ ಕೃತ್ಯದ ಮಾಹಿತಿ ಪಡೆದ ಸಿಸಿಬಿ ಡಿಸಿಪಿ, ಕೂಡಲೇ ಹೆಚ್ಚುವರಿ ಆಯುಕ್ತರ ಗಮನಕ್ಕೆ ತಂದಿದ್ದರು.
ಆಗ ಆಂತರಿಕ ಮಟ್ಟದ ವಿಚಾರಣೆ ನಡೆಸಿ ವರದಿ ನೀಡುವಂತೆ ಡಿಸಿಪಿಗೆ ಹೆಚ್ಚುವರಿ ಆಯುಕ್ತರು ಸೂಚಿಸಿದ್ದರು. ಅದರಂತೆ ಪ್ರಕರಣದ ತನಿಖಾಧಿಕಾರಿ ಸೇರಿದಂತೆ ಕೆಲ ಅಧಿಕಾರಿಗಳಿಂದ ವಿವರಣೆ ಪಡೆದ ಡಿಸಿಪಿ, ಹಣ ಪಡೆದು ಆರೋಪಿಗಳ ಪರವಾಗಿ ಯತೀಶ್ ಯತ್ನಿಸಿರುವುದು ಖಚಿತವಾಯಿತು. ಈ ಮಾಹಿತಿ ಮೇರೆಗೆ ಹೆಚ್ಚುವರಿ ಆಯುಕ್ತರಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದರು. ಅದರಂತೆ ಯತೀಶ್ ತಲೆದಂಡವಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ