
ಬೆಂಗಳೂರು(ಅ.22): ಮಾದಕ ವಸ್ತು ಜಾಲದ ಸುಳಿಗೆ ಸಿಲುಕಿರುವ ನಟಿ ಸಂಜನಾ ಗಲ್ರಾನಿ ಜತೆ ಹಣಕಾಸು ವ್ಯವಹಾರ ಹಿನ್ನೆಲೆಯಲ್ಲಿ ನಿರ್ಮಾಪಕ ಸೌಂದರ್ಯ ಜಗದೀಶ್ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬುಧವಾರ ವಿಚಾರಣೆ ನಡೆಸಿದ್ದಾರೆ.
ನೋಟಿಸ್ ಹಿನ್ನೆಲೆಯಲ್ಲಿ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ಚಲನಚಿತ್ರ ನಿರ್ಮಾಪಕರಾದ ಸೌಂದರ್ಯ ಜಗದೀಶ್ ಹಾಗೂ ಸಂಜನಾ ಮಾವ ವಿಚಾರಣೆಗೆ ಹಾಜರಾಗಿದ್ದರು. ನಟಿ ಜತೆ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿ ಅವರು ದಾಖಲೆ ಸಲ್ಲಿಸಿದ್ದಾರೆ. ‘ನಮಗೆ ಆಕೆಯ ಡ್ರಗ್ಸ್ ಪ್ರಕರಣಕ್ಕೂ ನಂಟಿಲ್ಲ. ಕೆಲವು ಸಾಲದ ರೂಪದಲ್ಲಿ ಹಣಕಾಸು ನೆರವು ನೀಡಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಡ್ರಗ್ ಮಾಫಿಯಾ: ನಟಿ ಸಂಜನಾ ಜಾಮೀನು ಅರ್ಜಿ, CCBಗೆ ಹೈಕೋರ್ಟ್ ನೋಟಿಸ್
ನಟಿ ಸಂಜನಾಳಿಗೆ ಸೌಂದರ್ಯ ಜಗದೀಶ್ 30 ಲಕ್ಷ ಕೊಟ್ಟಿದ್ದರು ಎಂಬ ಮಾಹಿತಿ ಲಭಿಸಿದ ಕಾರಣ ವಿಚಾರಣೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ