* ಕಾನೂನು ಬಾಹಿಕರವಾಗಿ ನೆಲೆಸಿದ್ದ 27 ಮಂದಿ ವಶಕ್ಕೆ
* ಪಾಸ್‌ಪೋರ್ಟ್ ನಿಯಮ ಉಲ್ಲಂಘನೆ ಆರೋಪ
* ಇತ್ತೀಚಿಗೆ ಹೆಚ್ಚಾದ ಡ್ರಗ್ಸ್ ದಂಧೆಯಲ್ಲಿ ವಿದೇಶಿ ಪ್ರಜೆಗಳ ಬಂಧನ
ಬೆಂಗಳೂರು(ಫೆ.08): ಮಾದಕ ವಸ್ತು(Drugs) ಮಾರಾಟ ಜಾಲದಲ್ಲಿ ತೊಡಗಿರುವ ಶಂಕೆ ಹಿನ್ನೆಲೆಯಲ್ಲಿ ನಗರದ ಎಂಟು ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಪ್ರಜೆಗಳ(Foreign Citizens) ಮನೆಗಳ ಮೇಲೆ ಸೋಮವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿ ಸಿಸಿಬಿ ಪೊಲೀಸರು ಚುರುಕು ಮುಟ್ಟಿಸಿದ್ದಾರೆ.
ಈ ದಾಳಿ ವೇಳೆ 78 ಮಂದಿ ವಿದೇಶಿಯರನ್ನು ಪರಿಶೀಲಿಸಿದ ಸಿಸಿಬಿ ಪೊಲೀಸರು, ಬಳಿಕ ಕಾನೂನುಬಾಹಿರವಾಗಿ ನೆಲೆಸಿದ್ದ 27 ಮಂದಿಯನ್ನು ವಶಕ್ಕೆ(Arrest) ಪಡೆದಿದ್ದಾರೆ. ಬಳಿಕ ಪಾಸ್‌ಪೋರ್ಟ್ ನಿಯಮ ಉಲ್ಲಂಘನೆ(Passport Rule Violation) ಆರೋಪದ ವಿಚಾರಣೆ ಮುಗಿಯುವರೆಗೆ ಅವರನ್ನು ವಿದೇಶಿ ಪ್ರಜೆಗಳ ನಿರ್ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Bengaluru: ಕೇಜಿಗಟ್ಟಲೇ ಕಲಬೆರಕೆ ಚಿನ್ನ ಮಾರುತ್ತಿದ್ದ ಗ್ಯಾಂಗ್: ಮಾಲೀಕ ಸೇರಿ ನಾಲ್ವರ ಬಂಧನ!
ಇತ್ತೀಚಿಗೆ ಡ್ರಗ್ಸ್ ದಂಧೆಯಲ್ಲಿ ವಿದೇಶಿ ಪ್ರಜೆಗಳ ಬಂಧನ ಹೆಚ್ಚಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಜಂಟಿ ಆಯುಕ್ತ(Crime) ರಮಣ ಗುಪ್ತ, ವಿದೇಶಿ ಪ್ರಜೆಗಳ ಅಡ್ಡೆಗಳ ಮೇಲೆ ದಾಳಿಗೆ ಸೂಚಿಸಿದ್ದರು. ಅಂತೆಯೇ ಸುಮಾರು 100ಕ್ಕೂ ಹೆಚ್ಚಿನ ಸಿಸಿಬಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, ಸೋಮವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ.ಡ್ರಗ್ಸ್ ಮಾರಾಟ ಹಾಗೂ ಸಾಗಾಣಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಕೆ.ಆರ್.ಪುರ, ರಾಮಮೂರ್ತಿ ನಗರ, ಹೆಣ್ಣೂರು, ಬಾಣಸವಾಡಿ,
ಕೊತ್ತನೂರು, ಸಂಪಿಗೆಹಳ್ಳಿ, ಬಾಗಲೂರು ಹಾಗೂ ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿದ್ದ ಸುಮಾರು 43 ವಿದೇಶಿ ಪ್ರಜೆಗಳ ಮನೆಗಳ ಮೇಲೆ ಬೆಳಗ್ಗೆ 6ರಿಂದ ದಾಳಿ ನಡೆಸಿ, ಪರಿಶೀಲಿಸಲಾಯಿತು ಎಂದು ಜಂಟಿ ಆಯುಕ್ತ (ಅಪರಾಧ) ರಮಣ ಗುಪ್ತ ತಿಳಿಸಿದ್ದಾರೆ.
ಈ 43 ಮನೆಗಳÜಲ್ಲಿ 78 ಜನ ವಿದೇಶಿ ಪ್ರಜೆಗಳು ಸಿಕ್ಕಿಬಿದ್ದರು. ಆಗ ಅವರ ಪೂರ್ವಾಪರ ಪರಿಶೀಲಿಸಿದಾಗ 17 ಪುರುಷರು ಹಾಗೂ 11 ಮಹಿಳೆಯರ ಪಾಸ್‌ಪೋರ್ಟ್ ಅವಧಿ ಮುಗಿದಿರುವುದು ಪತ್ತೆಯಾಯಿತು. ಈ ಪ್ರಜೆಗಳನ್ನು ವಿದೇಶಿಯ ಪ್ರಾದೇಶಿಕ ನೋಂದಣಿ ಕಚೇರಿಗೆ(ಎಫ್‌ಆಓ) ಅಧಿಕಾರಿಗಳ ವಶಕ್ಕೆ ಮುಂದಿನ ಕಾನೂನು ಕ್ರಮಕ್ಕೆ ಒಪ್ಪಿಸಲಾಯಿತು. ಓರ್ವ ವ್ಯಕ್ತಿ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಪಾಸ್ ಪೋರ್ಟ್ ಉಲ್ಲಂಘನೆ ಆರೋಪದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Roberrt ಸಿನಿಮಾ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ಪ್ರಕರಣ: ಮತ್ತಿಬ್ಬರ ಬಂಧನ
ಸ್ಪಾ ಮೇಲೆ ದಾಳಿ: ವಿದೇಶಿ ಮಹಿಳೆಯರ ರಕ್ಷಣೆ
ಬೆಂಗಳೂರು: ಅನೈತಿಕ ಚಟುವಟಿಕೆಗಳ ಶಂಕೆ ಹಿನ್ನೆಲೆಯಲ್ಲಿ ನಗರದ ಮೂರು ‘ಸ್ಪಾ’(Spa) ಮೇಲೆ ಭಾನುವಾರ ದಾಳಿ ನಡೆಸಿದ ಸಿಸಿಬಿ ಪೊಲೀಸರು(CCB Police), ವಿದೇಶಿಯರು ಸೇರಿ 13 ಮಂದಿ ಮಹಿಳೆಯರನ್ನು ರಕ್ಷಿಸಿದ್ದರು.
ಉತ್ತರ ಭಾರತ(North India) ಮೂಲದ ದೇವೆಂದರ್, ಅಭಿಜಿತ್ ಬಂಧಿತರು. ನಗರದ ರಾಯಲ್ ಸ್ಪಾ ಆ್ಯಂಡ್ ಸಲೂನ್, ಅಸ್ತೇಟಿಕ್ ಯೂನಿಸೆಕ್ಸ್ ಸೆಲೂನ್ ಆ್ಯಂಡ್ ಸ್ಪಾ, ನಿಸರ್ಗ ಆಯುರ್ವೇದಿಕ್ ಕ್ಲಿನಿಕ್‌ಗಳ ಮೇಲೆ ಸಿಸಿಬಿ ದಾಳಿ(CCB Raid) ನಡೆಸಿದೆ. ಕೆಲಸದ ನೆಪದಲ್ಲಿ ಯುವತಿಯರನ್ನು(Girls) ಕರೆತಂದು ಅಕ್ರಮ ಚಟುವಟಿಕೆಗೆ ಬಳಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ಹೇಳಿದ್ದರು.
ದಾಳಿ ವೇಳೆ ನೇಪಾಳ(Nepal) ಹಾಗೂ ಟರ್ಕಿ(Turkey) ದೇಶದ ಇಬ್ಬರು ಮಹಿಳೆಯರು(Woman), ನಾಗಾಲ್ಯಾಂಡ್‌ನ ಇಬ್ಬರು, ಅಸ್ಸಾಂನ ಮೂವರು ಮಹಿಳೆಯರು, ದೆಹಲಿಯ ಒಬ್ಬರು, ಪಶ್ಚಿಮ ಬಂಗಾಳದ ಮೂವರು ಹಾಗೂ ಸ್ಥಳೀಯ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಸಂಬಂಧ 9 ಮಂದಿ ವಿರುದ್ಧ ಎಚ್‌ಎಸ್‌ಆರ್ ಲೇಔಚ್, ಅಶೋಕ ನಗರ ಹಾಗೂ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದರು.