ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಗರದ ಮನೆಯೊಂದರ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ವಿದೇಶಿ ಮಹಿಳೆಯನ್ನು ರಕ್ಷಿಸಲಾಗಿದೆ. ಆರೋಪಿಗಳು ಹೆಚ್ಚಿನ ಹಣದ ಆಮಿಷವೊಡ್ಡಿ ವಿದೇಶಿ ಮಹಿಳೆಯನ್ನು ಮನೆಯಲ್ಲೇ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು(ಜ.30): ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಪ್ರತ್ಯೇಕ ವಾಗಿ ನಗರದ 5 ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿ 6 ಮಂದಿ ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ 4 ಮಹಿಳೆಯರು ಸೇರಿ ಒಟ್ಟು 10 ಮಂದಿ ಮಹಿಳೆಯರನ್ನು ರಕ್ಷಿಸಿದ್ದು, 7 ಆರೋಪಿಗಳನ್ನು ಬಂಧಿಸಿದ್ದಾರೆ.
ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಹೋಟೆಲ್ ಮೇಲೆ ದಾಳಿ ನಡೆಸಿ, ಓರ್ವ ವಿದೇಶಿ ಮಹಿಳೆ ಯರು ಹಾಗೂ ನಾಲ್ವರು ಹೊರರಾಜ್ಯದ ಮಹಿಳೆಯನ್ನು ರಕ್ಷಿಸಿದ್ದಾರೆ. ಉದ್ಯೋಗದಾಸೆ ತೋರಿಸಿ ಮಹಿಳೆಯನ್ನು ಅಕ್ರಮ ಮಾನವ ಕಳ್ಳಸಾಗಣೆ ಮಾಡಿಕೊಂಡು ಹೋಟೆಲ್‌ನಲ್ಲಿ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳ ವಿರುದ್ಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ:
ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರಾಚೇನ ಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರ ಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಓರ್ವ ವಿದೇಶಿ ಮತ್ತು ಓರ್ವ ಹೊರರಾಜ್ಯದ ಮಹಿಳೆಯರನ್ನು ರಕ್ಷಿಸ ಲಾಗಿದೆ. ಆರೋಪಿಗಳು ಬಡತನದಲ್ಲಿರುವ ಮಹಿಳೆಯರಿಗೆ ಉದ್ಯೋಗದ ಆಮಿಷವೊಡ್ಡಿ ನಗರಕ್ಕೆ ಕರೆತಂದು ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದರು. ಮೊಬೈಲ್‌ಗಳಲ್ಲಿ ಗಿರಾಕಿಗಳನ್ನು ಸಂಪರ್ಕಿಸಿ ಅಪಾಟ್ ೯ಮೆಂಟ್‌ಗೆ ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತೀ ಹೆಚ್ಚು ವೇಶ್ಯಾವಾಟಿಕೆ ನಡೆಯುವ ರಾಜ್ಯವಿದು: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?
ಮನೆಯಲ್ಲಿ ಕೂಡಿ ಹಾಕಿ ದಂಧೆ:
ರಾಮಮೂರ್ತಿನಗರ ಮತ್ತು ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾ ವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ 4 ವರ್ಷದ ಮಗುವನ್ನು ರಕ್ಷಿಸಲಾಗಿದೆ. ರಕ್ಷಣೆ ಮಾಡಲಾದ ಇಬ್ಬರು ವಿದೇಶಿ ಮಹಿಳೆಯರು ಹಾಗೂ 4 ವರ್ಷದ ಮಗುವನ್ನು ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ(ಎಫ್‌ಆರ್ ಆರ್‌ಓ) ಸಹಾಯದಿಂದ ಅವರ ದೇಶಕ್ಕೆ ವಾಪಾಸ್ ಕಳುಹಿಸಲಾಗಿದೆ. ರಾಮಮೂರ್ತಿ ನಗರ ಮತ್ತು ಎಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲೇ ನಡೆಯುತ್ತಿತ್ತು ವೇಶ್ಯಾವಾಟಿಕೆ
ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಗರದ ಮನೆಯೊಂದರ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ವಿದೇಶಿ ಮಹಿಳೆಯನ್ನು ರಕ್ಷಿಸಲಾಗಿದೆ. ಆರೋಪಿಗಳು ಹೆಚ್ಚಿನ ಹಣದ ಆಮಿಷವೊಡ್ಡಿ ವಿದೇಶಿ ಮಹಿಳೆಯನ್ನು ಮನೆಯಲ್ಲೇ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.