ಬೆಂಗಳೂರು: ವಿಡಿಯೋ ಗೇಮ್ಸ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ದಾಳಿ

By Kannadaprabha News  |  First Published Feb 18, 2024, 8:18 PM IST

ವಿಡಿಯೋ ಗೇಮ್ಸ್‌ ಎಂಬ ಅದೃಷ್ಟದ ಜೂಜಾಟದ ಅಡ್ಡೆ ಮೇಲೆ ದಾಳಿ ಮಾಡಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ.


ಬೆಂಗಳೂರು (ಫೆ.18): ವಿಡಿಯೋ ಗೇಮ್ಸ್‌ ಎಂಬ ಅದೃಷ್ಟದ ಜೂಜಾಟದ ಅಡ್ಡೆ ಮೇಲೆ ದಾಳಿ ಮಾಡಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ.

ರಾಜರಾಜೇಶ್ವರಿನಗರ ಠಾಣಾ ವ್ಯಾಪ್ತಿಯ ವಿ.ಲೆಗೆಸಿ ರಸ್ತೆಯ ಬಳಿ ರಘು ಆರ್ಕೆಡ್‌ ಬಿಲ್ಡಿಂಗ್‌ನ 2ನೇ ಮಹಡಿಯಲ್ಲಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ವಿಡಿಯೋ ಗೇಮ್ಸ್‌ ಅದೃಷ್ಟದ ಜೂಜಾಟದಲ್ಲಿ ತೊಡಗಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು. 9 ಮಂದಿ ಗ್ರಾಹಕರು ಹಾಗೂ ಇಬ್ಬರು ಮ್ಯಾನೇಜರ್‌ಗಳು ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ.

Latest Videos

undefined

ನಿರ್ಮಾಪಕಿಯಿಂದ ಹಣ ಸುಲಿಯಲು ಕಿಡ್ನಾಪ್‌ ಕಥೆ ಕಟ್ಟಿದ ಕಾರು ಚಾಲಕ; ಮುಂದೆ ನಡೆದಿದ್ದೇನು?

ದಾಳಿ ವೇಳೆ ₹23 ಲಕ್ಷ ಮೌಲ್ಯದ 23 ವಿಡಿಯೋ ಗೇಮ್ಸ್‌ ಯಂತ್ರಗಳು, ₹1.74 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಜೂಜಾಡಿಸಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಇಬ್ಬರು ಮಾಲೀಕರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ. 

ಈ ಘಟನೆ ಸಂಬಂಧ ರಾಜರಾಜೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕದ್ದ ಬೈಕ್‌ನಲ್ಲೇ ಫೀಲ್ಡ್‌ಗಿಳಿಯುತ್ತಿದ್ದ ಆಸಾಮಿ; ಮೊಬೈಲ್‌ ಹೇಗೆ ದೋಚುತ್ತಿದ್ದ ಗೊತ್ತಾ?

click me!