ಕೊನೆಗೂ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು: ಯಾವ್ಯಾವ ಸೆಕ್ಷನ್?

Published : Mar 26, 2021, 04:11 PM ISTUpdated : Mar 26, 2021, 05:19 PM IST
ಕೊನೆಗೂ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು: ಯಾವ್ಯಾವ ಸೆಕ್ಷನ್?

ಸಾರಾಂಶ

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಕೊನೆಗೂ ಎಫ್‌ಐಆರ್ ದಾಖಲಾಗಿದೆ. ಹಾಗಾದ್ರೆ ಯಾವ್ಯಾವ ಸೆಕ್ಷನ್ ಹಾಕಬಹುದು?

ಬೆಂಗಳೂರು, (ಮಾ.26): ರಾಸಲೀಲೆ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ದೂರು ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

"

 ಸಿಡಿ ಕೇಸ್​ನ ಯುವತಿ ಪರವಾಗಿ ವಕೀಲ ಜಗದೀಶ್​ ಕೆ.ಎನ್. ನೇತೃತ್ವದ ತಂಡ ಪೊಲೀಸ್​​ ಕಮಿಷನರ್ ಕಚೇರಿಗೆ ಇಂದು (ಶುಕ್ರವಾರ) ಮಧ್ಯಾಹ್ನ ದೂರು ನೀಡಿದೆ.

ಸಿ.ಡಿ.ಕೇಸ್‌ಗೆ ಸ್ಫೋಟಕ ಟ್ವಿಸ್ಟ್: ರಮೇಶ್ ಜಾರಕಿಹೊಳಿಗೆ ಬಿಗ್ ಶಾಕ್!

ಕಮಿಷನರ್ ಕಮಲ್ ಪಂತ್ ಸೂಚನೆ ಮೇರೆಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.  ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ, ಮಾನಹಾನಿ, ಜೀವ ಬೆದರಿಕೆಯೊಡ್ಡಿದ್ದಾಗಿ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಐಪಿಸಿ ಸೆಕ್ಷನ್ 376 ಸಿ ( ಅಧಿಕಾರ ದುರುಪಯೋಗ ಪಡಿಸಿಕೊಂಡು ಲೈಂಗಿಕ ದೌರ್ಜನ್ಯ), ಸೆಕ್ಷನ್ 354 (ಮಹಿಳೆಯ ಮಾನಹಾನಿ), 506(ಜೀವ ಬೆದರಿಕೆ) , 354 (ಮಹಿಳೆಯ ಮಾನಹಾನಿ), ಐಟಿ ಕಾಯ್ದೆ 67 (ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪ) ರ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ