
ವಿಜಯಪುರ (ಏ.02): ಮಾಜಿ ಸಚಿವರ ಸಿ.ಡಿ. ಪ್ರಕರಣ ಸಂಬಂಧ ನಮ್ಮ ಬಳಿ ಇನ್ನೂ 9 ಸಾಕ್ಷ್ಯ ಇವೆ. ಅವೆಲ್ಲಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮುಳುವಾಗಲಿವೆ ಎಂದು ಯುವತಿಯ ಸಹೋದರ ಹೇಳಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನನ್ನ ಸಹೋದರಿ ಮೇಲೆ ಡಿ.ಕೆ.ಶಿವಕುಮಾರ್ ಒತ್ತಡ ಇದೆ. ಇದನ್ನು ನಾನು ದಾಖಲೆ ಸಮೇತ ಸಾಬೀತುಪಡಿಸುವೆ ಎಂದರು.
ಸಿಡಿ ಹಿಂದಿನ ಕಾಣದ ಕೈಗಳು ಒಂದೊಂದಾಗಿ ಬಹಿರಂಗ! ..
ಸಮಗ್ರವಾಗಿ ತನಿಖೆಯಾದರೆ ಎಲ್ಲ ವಿಷಯಗಳು ಹೊರಬರುತ್ತವೆ. ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಇಂದಲ್ಲ ನಾಳೆ ಡಿ.ಕೆ. ಶಿವಕುಮಾರ್ ಹೆಸರು ಹೊರಗೆ ಬಂದೇ ಬರುತ್ತದೆ ಎಂದು ತಿಳಿಸಿದರು.
ಈಗಾಗಲೇ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಳು ನಡೆಯುತ್ತಿದೆ. ಸೀಡಿ ಲೇಡಿ ಎಸ್‌ಐಟಿ ತನಿಖೆ ನಡೆಸುತ್ತಿದ್ದು ಪೋಷಕರ ವಿರುದ್ಧವೂ ಆಕೆ ಅಸಮಾಧಾನಗೊಂಡಿದ್ದಾಳೆ. ಇತ್ತ ಆಕೆಯ ಕುಟುಂಬ ಡಿಕೆ ಶಿವಕುಮಾರ್ ವಿರುದ್ಧ ಆರೋಪಗಳನ್ನು ಮುಂದುವರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ