
ರಾಯಚೂರು, [ಫೆ.23]: ಫೇಸ್‍ಬುಕ್‍ನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಪೋಸ್ಟ್ ಹಾಕುತ್ತಿದ್ದ ಪುಂಡ ಯುವಕನನ್ನ ಜಿಲ್ಲೆಯ ಸೈಬರ್ ಎಕನಾಮಿಕ್ ನಾರ್ಕೋಟಿಕ್ (ಸಿಇಎನ್] ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಸಿರವಾರ ತಾಲೂಕಿನ ಮರಕಿಗುಡ್ಡ ತಾಂಡಾದ ಅಮರೇಶ್ ಬಂಧಿತ ಆರೋಪಿ. ಫೇಸ್‍ಬುಕ್‍ನಲ್ಲಿ ನಕಲಿ ಖಾತೆ ತೆರೆಯಲು ಸಹಕರಿಸಿದ್ದ ಇನ್ನೊಬ್ಬ ಆರೋಪಿ ರಾಜು ಪವಾರ ಪರಾರಿಯಾಗಿದ್ದಾನೆ.
ವಿಡಿಯೋ: ಮಹಿಳೆಯ ಅಶ್ಲೀಲ ಪೋಟೋ ಹರಿಬಿಟ್ಟ ವ್ಯಕ್ತಿಗೆ ಬಿಸಿ-ಬಿಸಿ ಕಜ್ಜಾಯ
ಈ ಇಬ್ಬರು ಪುಂಡರು ಓರ್ವ ಮಹಿಳೆಯ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದರು. ಮಹಿಳೆ ಫೋಟೋವನ್ನು ಅಶ್ಲೀಲವಾಗಿ ಮಾರ್ಫಿಂಗ್ ಮಾಡಿ ಫೇಸ್‍ಬುಕ್‍ಗೆ ಅಪ್ಲೋಡ್ ಮಾಡುತ್ತಿದ್ದರು.
ಅಷ್ಟೇ ಅಲ್ಲದೆ ಕೆಲವು ವಿಡಿಯೋಗಳನ್ನು ಆರೋಪಿಗಳು ಅಪ್ಲೋಡ್ ಮಾಡಿದ್ದಾರೆ. ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರಿಗೆ ಆರೋಪಿಗಳು ಫೋಟೋ ಹಾಗೂ ವಿಡಿಯೋ ಅಪ್ಲೋಡ್ ಮಾಡುತ್ತಿದ್ದ ಕಂಪ್ಯೂಟರ್ ಐಪಿ ಅಡ್ರೆಸ್ ಸಿಕ್ಕಿದೆ. ಅದರ ಆಧಾರದ ಮೇಲೆ ಶೋಧಕಾರ್ಯ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ