ಚನ್ನಪಟ್ಟಣ ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಯುಸೂಫ್, ಫೈರೋಜ್ ಸೇರಿ ನಾಲ್ವರ ಬಂಧನ, ಏನಿದು ಪ್ರಕರಣ?

Published : Apr 20, 2025, 10:18 AM ISTUpdated : Apr 20, 2025, 10:44 AM IST
ಚನ್ನಪಟ್ಟಣ ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಯುಸೂಫ್, ಫೈರೋಜ್ ಸೇರಿ ನಾಲ್ವರ ಬಂಧನ, ಏನಿದು ಪ್ರಕರಣ?

ಸಾರಾಂಶ

ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ಪೇದೆಗಳ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪುರ ಠಾಣೆ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ರಾಮನಗರ (ಏ.20): ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ಪೇದೆಗಳ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪುರ ಠಾಣೆ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ನಗರದ ಬೀಡಿ ಕಾಲೋನಿ ವಾಸಿಗಳಾದ ಯುಸೂಫ್ ಖಾನ್, ಫೈರೋಜ್ ಖಾನ್ ಹಾಗೂ ಸಮೀರ್ ಖಾನ್ ಬಂಧಿತರು. ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು- ಮೈಸೂರು ಹೆದ್ದಾರಿಯ ಕೆಂಗಲ್ ಬಳಿ ಅಪರಿಚಿತ ಯುವಕರು ತಮ್ಮ ಜೀವಕ್ಕೆ ಹಾಗೂ ಸಾರ್ವಜನಿಕರ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ದ್ವಿಚಕ್ರ ವಾಹನದಲ್ಲಿ ವೀಲ್ಹಿಂಗ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಪ್ರಕರಣ; ₹2000 ಕೋಟಿ ಆಸ್ತಿ ಕಾರಣವಾಯ್ತಾ?

ಈ ಸಂಬಂಧ 2025ರ ಏಪ್ರಿಲ್ 15ರಂದು ಚನ್ನಪಟ್ಟಣ ಸಂಚಾರ ಠಾಣೆ ಮೊ.ಸಂ: 53/2025 ಕಲಂ 281, BNS 129, 184, 189 IMV ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಂತರ ಆರೋಪಿಗಳನ್ನು ಪತ್ತೆ ಮಾಡಿ ನೋಟಿಸ್ ಜಾರಿ ಮಾಡಲು ಪೇದೆಗಳಾದ ಜಯಕುಮಾರ್ ಮತ್ತು ಬಸವರಾಜ ಓನಿಮಣಿ ಹೋಗಿದ್ದರು. ಈ ಸಂದರ್ಭದಲ್ಲಿ ಬಂಧಿತ ಆರೋಪಿಗಳು ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿ, ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿ, ಕರ್ತವ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಕಿತ್ತುಕೊಂಡು ಹೋಗಿದ್ದರು.

ಇದನ್ನೂ ಓದಿ: ಶಾಪಿಂಗ್ ಬಂದ ಯುವತಿ ಜೊತೆ ಅಸಭ್ಯ ವರ್ತನೆ; ಯುವಕನಿಗೆ ನಡುರಸ್ತೇಲಿ ಧರ್ಮದೇಟು!

ಈ ಬಗ್ಗೆ ಪೇದೆಗಳು ನೀಡಿದ ದೂರಿನ ಮೇರೆಗೆ ರಾಮನಗರ ಪುರ ಪೊಲೀಸ್ ಠಾಣೆ ಮೊ.ಸಂ:47/2025 ಕಲಂ:132, 352, 310 BNS ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು. ಸದರಿ ಪ್ರಕರಣದಲ್ಲಿ ತನಿಖೆ ಕೈಗೊಂಡು, ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ, ಮೂವರು ಆರೋಪಿಗಳನ್ನು ಹಾಗೂ ಓರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದು, ದರೋಡೆ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್