ಬಕ್ರೀದ್ ದಿನವೇ ಪತ್ನಿಯನ್ನ ಕೊಂದ ಪಾಪಿ ಪತಿ... ಚನ್ನರಾಯಪಟ್ಟಣದಲ್ಲಿ ನಿಜಕ್ಕೂ ಏನಾಯ್ತು?

Published : May 28, 2026, 10:08 PM IST
Hassan

ಸಾರಾಂಶ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದ ಕಂಚಗಾರ ಬೀದಿಯಲ್ಲಿ ಮನಕಲಕುವ ಘಟನೆ ನಡೆದಿದೆ. ಬಕ್ರೀದ್ ಹಬ್ಬದ ದಿನವೇ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯನ್ನು..

ಹಾಸನ (ಮೇ.28): ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದ ಕಂಚಗಾರ ಬೀದಿಯಲ್ಲಿ ಮನಕಲಕುವ ಘಟನೆ ನಡೆದಿದೆ. ಬಕ್ರೀದ್ ಹಬ್ಬದ ದಿನವೇ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯನ್ನು ಗುಲ್‌ಶರ್ ಬಾನು ಎಂದು ಗುರುತಿಸಲಾಗಿದ್ದು, ಪತಿ ಸೈಫ್ ಉಲ್ಲಾ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಕುಟುಂಬದವರ ಮಾಹಿತಿ ಪ್ರಕಾರ, ಸೈಫ್ ಉಲ್ಲಾ ಮೊದಲಿನಿಂದಲೂ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಹಣಕ್ಕಾಗಿ ಪತ್ನಿಯ ಮನೆಯವರನ್ನು ನಿರಂತರವಾಗಿ ಪೀಡಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಹಬ್ಬದ ದಿನವೂ ಜಗಳ ನಡೆಸಿ ಹಲ್ಲೆ ಮಾಡಿದ ಬಳಿಕ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲು

ಈ ಪ್ರಕರಣದಲ್ಲಿ ಸೈಫ್ ಉಲ್ಲಾ ಕುಟುಂಬದವರ ಪಾತ್ರವೂ ಇದೆ ಎಂದು ಮೃತಳ ಕುಟುಂಬದವರು ಆರೋಪಿಸಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೃಷಿಕನಾಗಿ ಬದುಕು ಕಟ್ಟಿಕೊಳ್ಳುವ ಕನಸು ಕಂಡ ಟೆಕ್ಕಿಯ ಜೀವ ಕಸಿದ ಸಿಡಿಲು: ಕೊಡಗಿನ ಯುವಕ ಬಲಿ
Tantan Dating App; ₹1.66 ಕೋಟಿ ಹೂಡಿಕೆ… ಲಾಭ ಕೇವಲ ₹4,250! ಡೇಟಿಂಗ್ ಆ್ಯಪ್‌ನಲ್ಲಿ ಸಿಕ್ಕ ಸುಂದರಿ ಮಾತು ಕೇಳಿ ಬೆತ್ತಲಾದ ಟೆಕ್ಕಿ!