ರೇಣುಕಾಸ್ವಾಮಿ ಕೊಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ ಚಾರ್ಜ್‌ಶೀಟ್ ಸಲ್ಲಿಸಲಾಗುವುದು. ಅದಕ್ಕೆ ತನ್ನದೇ ಆದಪ್ರಕ್ರಿಯೆಗಳಿವೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಅದನ್ನು ಮಾಡುವುದಿಲ್ಲ ಎಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು(ಜು.09): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ಚಿತ್ರನಟ ದರ್ಶನ್, ಅವರ ಆಪ್ತ ಪವಿತ್ರಾ ಗೌಡ ಮತ್ತಿತರ 15 ಮಂದಿ ಆರೋಪಿಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಸಂಗ್ರಹದ ನಂತರ ಚಾರ್ಜ್ ಶೀಟ್‌ಸಲ್ಲಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ ಚಾರ್ಜ್‌ಶೀಟ್ ಸಲ್ಲಿಸಲಾಗುವುದು. ಅದಕ್ಕೆ ತನ್ನದೇ ಆದಪ್ರಕ್ರಿಯೆಗಳಿವೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಅದನ್ನು ಮಾಡುವುದಿಲ್ಲ ಎಂದರು.
ಮಾಡದೇ ಇರುವ ಕೊಲೆಗೆ ಜೈಲಿನಲ್ಲಿ ಇದ್ದಾರೆ, ನೋವು ಆಗಲ್ವಾ ಅಂದ್ರು ನಿರ್ಮಾಪಕ ಕೆ ಮಂಜು!
ಮುಡಾ ಪ್ರಕರಣ ಮುಚ್ಚಿ ಹಾಕಲು ಹುನ್ನಾರ ನಡೆಯುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ನಾವು ಯಾವ ಕೇಸನ್ನೂ ಮುಚ್ಚಿಹಾಕುವುದಿಲ್ಲ. ಎಲ್ಲದರ ತನಿಖೆ ನಡೆಯುತ್ತದೆ. ಈಗಾಗಲೇ ಇದರ ಬಗ್ಗೆ ಮುಖ್ಯಮಂತ್ರಿ ಯವರು ಸ್ಪಷ್ಟಿಕರಣ ಕೊಟ್ಟಿದ್ದಾರೆ ಎಂದರು.