
ಚೆನ್ನೈ(ಅ. 20) ತಮಿಳುನಾಡಿನಲ್ಲಿ ಹಾಡಹಗಲೆ ಒಂದು ದರೋಡೆ ನಡೆದಿದೆ. ತಮಿಳುನಾಡು ರಾಜಧಾನಿ ಚೆನ್ನೈನ ಟಿ ನಗರದ ಉತ್ತಮ್ ಜ್ಯುವೆಲರ್ಸ್ ದರೋಡೆ ಮಾಡಿರುವ ಕಳ್ಳರು 2 ಕೋಟಿ ರೂ. ಮೌಲ್ಯದ ಆಭರಣ ಅಪಹರಿಸಿದ್ದಾರೆ.
ಉತ್ತಮ ಜ್ಯುವೆಲರ್ಸ್ ನ ಉತ್ಪಾದನಾ ಘಟಕದ ಬಾಗಿಲು ಮುರಿದ ದುಷ್ಕರ್ಮಿಗಳು ದರೋಡೆ ಮಾಡಿದ್ದಾರೆ. ಎರಡು ಕೋಟಿ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ಮತ್ತು ವಜ್ರದ ಆಭರಣ ದೋಚಲಾಗಿದೆ.
ಬೆಂಗಳೂರಿನಲ್ಲಿ ಮೈಮರೆತು ಮೊಬೈಲ್ ನಲ್ಲಿ ಮಾತನಾಡಿದ್ದರೆ ಅಷ್ಟೆ
ಈ ಬಗ್ಗೆ ಚೆನ್ನೈ ಪೊಲೀಸರು ತನಿಖೆ ಆರಂಭಿಸಿದ್ದು, ಅಪರಾಧಿಗಳನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮುಂದಿನ ಹೆಜ್ಜೆ ಇಡುತ್ತಿದ್ದಾರೆ. ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ