Chikkamagaluru: ರಾಷ್ಟ್ರಧ್ವಜಕ್ಕೆ ಅಪಮಾನ: ಮಾಜಿ ಸಿಎಂ ಸಿದ್ದು ವಿರುದ್ಧ ದೂರು

By Govindaraj S  |  First Published Aug 10, 2022, 11:58 PM IST

ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಪರ- ವಿರೋಧ ಚರ್ಚೆ ನಡೆಯುತ್ತಿದೆ. ಇದರ ನಡುವೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡರು ಸಿದ್ದರಾಮಯ್ಯ ವಿರುದ್ದ ಪೊಲೀಸ್ ಠಾಣೆಗೆ ದೂರು‌ ಸಲ್ಲಿಕೆ ಮಾಡಿದ್ದಾರೆ.


ಚಿಕ್ಕಮಗಳೂರು (ಆ.10): ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಪರ- ವಿರೋಧ ಚರ್ಚೆ ನಡೆಯುತ್ತಿದೆ. ಇದರ ನಡುವೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡರು ಸಿದ್ದರಾಮಯ್ಯ ವಿರುದ್ದ ಪೊಲೀಸ್ ಠಾಣೆಗೆ ದೂರು‌ ಸಲ್ಲಿಕೆ ಮಾಡಿದ್ದಾರೆ.

ಸಿ.ಟಿ ರವಿ ಸ್ವಗ್ರಾಮದಲ್ಲಿ ಸಿದ್ದರಾಮಯ್ಯ ವಿರುದ್ದ ದೂರು: ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ‌ಸಿ.ಟಿ ರವಿ ಸ್ವಗ್ರಾಮ ಆಲ್ದೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಜಿಲ್ಲಾ ಬಿಜೆಪಿ ವತಿಯಿಂದ ಸಿದ್ದರಾಮಯ್ಯ ವಿರುದ್ಧ ರಾಷ್ಟ್ರಧ್ವಜದ ಬಗ್ಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ  ದೂರು ನೀಡಲಾಗಿದೆ. ಬಾವುಟದ ಬಣ್ಣಗಳು ಕೇಸರಿ ಬಿಳಿ ಹಸಿರು ಎನ್ನುವ ಬದಲು ಕೆಂಪು ಎಂದಿದ್ದ ಮಾಜಿ ಸಿಎಂ ಕೇಸರಿ ಬದಲು ಕೆಂಪು ಎಂದು ದ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

Latest Videos

undefined

ಬಿಜೆಪಿಯವರು ತ್ರಿವರ್ಣಧ್ವಜಕ್ಕೆ ಗೌರವ ಕೊಡುವವರಲ್ಲ: ಸಿದ್ದರಾಮಯ್ಯ

ಇದು ಮಾಜಿ ಸಿಎಂ ವಿರೋಧಾತ್ಮಕ ಹೇಳಿಕೆ ಇದನ್ನು ಖಂಡಿಸುತ್ತೇವೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಠಾಣೆಗೆ ದೂರು ನೀಡಿದ ಬಿಜೆಪಿ ಮುಖಂಡ ಗಿರೀಶ್ ಹಾಗೂ ಬಜರಂಗದಳದ ಶಿವಕುಮಾರ್ ಕೇಸರಿ ಎನ್ನುವ ಬದಲು ಕೆಂಪು ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಲ್ದೂರು ಪಿಎಸ್ಐ ಭುವನೇಶ್‌ಗೆ ಕಂಪ್ಲೇಂಟ್ ಕೊಟ್ಟಿದ್ದಾರೆ, ರಾಷ್ಟ್ರಧ್ವಜಕ್ಕೆ ಅಪಮಾನ ಬೆನ್ನಲ್ಲೇ ಕಾಫಿನಾಡಲ್ಲಿ ಬಿಜೆಪಿಗರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಹರ್‌ ಘರ್‌ ತಿರಂಗಾ ಮೋದಿ ನಾಟಕ: ಪ್ರಧಾನಿ ನರೇಂದ್ರ ಮೋದಿ ಒಬ್ಬ ದೊಡ್ಡ ನಾಟಕಕಾರ. ರಾಷ್ಟ್ರಗೀತೆ, ರಾಷ್ಟ್ರಧ್ವಜ ಅಪಮಾನಿಸಿದ ಬಿಜೆಪಿಯವರು ಈಗ ‘ಹರ್‌ ಘರ್‌ ತಿರಂಗಾ’ ಹೆಸರಿನಲ್ಲಿ ನಾಟಕ ಆಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಂಘ ಪರಿವಾರ, ಹಿಂದೂ ಮಹಾಸಭಾದ ಕೊಡುಗೆ ಏನೂ ಇಲ್ಲ. ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಕಾಂಗ್ರೆಸ್‌ ಕೊಡುಗೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಕ್ವಿಟ್‌ ಇಂಡಿಯಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ಬಳಿಕ 1951ರಲ್ಲಿ ಜನಸಂಘ ಸ್ಥಾಪನೆಯಾಯಿತು. ಗೋಳ್ವಲ್ಕರ್‌ ಮತ್ತು ಸಾವರ್ಕರ್‌ ತ್ರಿವರ್ಣ ಧ್ವಜ ವಿರೋಧಿಸಿದ್ದರು. ಇತ್ತೀಚೆಗಷ್ಟೇ ನಾಗ್ಪುರದ ಆರ್‌ಎಸ್‌ಎಸ್‌ ಕಚೇರಿ ಮೇಲೆ ರಾಷ್ಟ್ರ ಧ್ವಜ ಹಾರಿಸಲು ಆರಂಭಿಸಿದ್ದಾರೆ. ಆದರೆ ಈಗ ನರೇಂದ್ರ ಮೋದಿ ಮತ್ತು ಬಿಜೆಪಿಯವರು ‘ಹರ್‌ ಘರ್‌ ತಿರಂಗಾ’ ಅಭಿಯಾನದ ನಾಟಕ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಕಲಿಗಳ ಬಾಯಿ ಮುಚ್ಚಿಸಬೇಕು: ದೇಶಕ್ಕಾಗಿ ಆಸ್ತಿಪಾಸ್ತಿ ನಷ್ಟ, ಜೈಲುವಾಸ, ಸಾವು ನೋವು ಅನುಭವಿಸಿದವರು ಕಾಂಗ್ರೆಸ್‌ನವರು. ಸಾವರ್ಕರ್‌ ಬ್ರಿಟೀಷರಿಗೆ ಮುಚ್ಚಳಿಕೆ ಬರೆದುಕೊಟ್ಟಿದ್ದು, ಬಿಜೆಪಿಯವರು ಮಾತ್ರ ವೀರ ಸಾವರ್ಕರ್‌ ಎಂದು ವಿಜೃಂಭಿಸುತ್ತಿದ್ದಾರೆ. ದೇಶಕ್ಕಾಗಿ ಆರ್‌ಎಸ್‌ಎಸ್‌ನ ಯಾರಾದರೂ ಪ್ರಾಣಾರ್ಪಣೆ ಮಾಡಿದ್ದಾರೆಯೇ. ಇವರು ನಮಗೆ ದೇಶಭಕ್ತಿಯ ಪಾಠ ಮಾಡುತ್ತಾರೆ ಎಂದು ತರಾಟೆ ತೆಗೆದುಕೊಂಡರು. ನಾವು ನಕಲಿ ದೇಶಪ್ರೇಮಿಗಳ ಬಾಯಿ ಮುಚ್ಚಿಸಬೇಕು ಎಂದರು.

ಖಾಸಗೀಕರಣದಿಂದ ಮೀಸಲಾತಿ ಕಣ್ಮರೆ: ಸಿದ್ದರಾಮಯ್ಯ ಆತಂಕ

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಬ್ರಿಟೀಷರಿಗೆ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿದ ದಿನವಿದು. ಆಗ ಆರ್‌ಎಸ್‌ಎಸ್‌, ಜನಸಂಘ ಇರಲಿಲ್ಲ. ಆದರೆ ಇಂದು ನಕಲಿ ದೇಶ ಭಕ್ತರು ಕಾಂಗ್ರೆಸ್‌ಗೆ ದೇಶಭಕ್ತಿ ಬಗ್ಗೆ ಹೇಳಿಕೊಡಲು ಬರುತ್ತಿದ್ದಾರೆ. ಈಗಲೂ ಆರ್‌ಎಸ್‌ಎಸ್‌ ಕಚೇರಿ ಮೇಲೆ ಭಗವಾಧ್ವಜ ಹಾರಾಡುತ್ತಿದೆ ಎಂದು ಟೀಕಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಮಾಜಿ ಸಚಿವ ಕೆ.ಜೆ.ಜಾಜ್‌ರ್‍ ಮತ್ತಿತರರು ಹಾಜರಿದ್ದರು.

click me!