ಬೋರ್‌ವೆಲ್ ಲಾರಿಗೆ ಗುದ್ದಿದ ಬೊಲೆರೊ ಜೀಪ್: ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು, ಕೂಲಿ ಮಾಡಿ ಮನೆಗೆ ಮರಳುವಾಗ ದುರಂತ

Published : Jan 28, 2026, 09:44 PM IST
Chikkamagaluru Laborer dies as Bolero crashes borewell truck

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಬಳಿ ಕೂಲಿ ಕೆಲಸ ಮುಗಿಸಿ ಮರಳುತ್ತಿದ್ದ ಕಾರ್ಮಿಕರಿದ್ದ ಬೊಲೆರೊ ಜೀಪ್, ನಿಂತಿದ್ದ ಬೋರ್‌ವೆಲ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರೆ.

ಚಿಕ್ಕಮಗಳೂರು (ಜ.28): ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಬಳಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಲ್ಲತ್ತಿಗಿರಿಯಿಂದ ಕೂಲಿ ಕೆಲಸ ಮುಗಿಸಿಕೊಂಡು ಎಂ.ಸಿ.ಹಳ್ಳಿಗೆ ಮರಳುತ್ತಿದ್ದ ಕಾರ್ಮಿಕರಿದ್ದ ಬೊಲೆರೊ ಜೀಪ್, ರಸ್ತೆ ಬದಿಯಲ್ಲಿ ನಿಂತಿದ್ದ ಬೋರ್‌ವೆಲ್ ಲಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಏಳು ಜನರಲ್ಲಿ ಓರ್ವ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಆರು ಮಂದಿಗೆ ಗಂಭೀರ ಗಾಯ: ಶಿವಮೊಗ್ಗಕ್ಕೆ ರವಾನೆ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಳಿದ ಆರು ಜನರನ್ನು ಕೂಡಲೇ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮೃತಪಟ್ಟವರು ಹಾಗೂ ಗಾಯಗೊಂಡವರು ಎಂ.ಸಿ.ಹಳ್ಳಿ ಮೂಲದವರಾಗಿದ್ದು, ನಿತ್ಯ ಕೂಲಿ ಕೆಲಸಕ್ಕಾಗಿ ಕಲ್ಲತ್ತಿಗಿರಿಗೆ ಹೋಗಿ ಬರುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ

ಘಟನಾ ಸ್ಥಳಕ್ಕೆ ತರೀಕೆರೆ ಹಾಗೂ ಲಿಂಗದಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಯಾಗ್ರ ತಿಂದು ಚಿತ್ರವಿಚಿತ್ರ ಲೈಂ*ಗಿಕ ಕಿರುಕುಳ ಕೊಡುತ್ತಿದ್ದ ಪತಿ; ಕಾಟ ತಾಳಲಾರದೇ ವಿಷ ಹಾಕಿ ಕೊಂ*ದ ಪತ್ನಿ!
ಮೃತ ಸೋದರನ ಮೂವರು ಸ್ನೇಹಿತರಿಂದಲೇ 6 ವರ್ಷದ ಬಾಲಕಿಯ ಗ್ಯಾಂಗ್‌*ರೇಪ್: ಆರೋಪಿಗಳೆಲ್ಲರೂ 10ರಿಂದ 14 ವರ್ಷದೊಳಗಿನವರು