
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಮಾ.19): ಬೈಕಿಗೆ ಹಿಂದಿನಿಂದ ಪೊಲೀಸ್ ಜೀಪ್ ಡಿಕ್ಕಿಯೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಚ್ಚೇರಿ ಸಮೀಪದ ಶ್ರೀರಂಗ ಕಾಂಕ್ರೀಟ್ ಪ್ರಾಡಕ್ಟ್ ಬಳಿ ನಡೆದಿದೆ. ಮೃತನನ್ನ ಕಡೂರು ತಾಲೂಕಿನ ಸಿಂಗಟಗೆರೆ ಹೋಬಳಿ ಸಮೀಪದ ಪಟ್ಟೇದೇವರಹಳ್ಳಿಯ 47 ವರ್ಷದ ಗಂಗೋಜಿ ರಾವ್ ಎಂದು ತಿಳಿದು ಬಂದಿದೆ.
ಚಾಲಕನ ವರ್ತನೆಯನ್ನು ಖಂಡಿಸಿ ಆಕ್ರೋಶ: ಮೃತ ಗಂಗೋಜಿರಾವ್ ಕಡೂರಿನಿಂದ ಪಟ್ಟೇದೇವರಹಳ್ಳಿಗೆ ಹೋಗುತ್ತಿದ್ದರು. ಸಿಂಗಟಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಜೀಪ್ ಕೂಡ ಕಡೂರಿನಿಂದ ಸಿಂಗಟಗೆರೆ ಪೋಲಿಸ್ ಸ್ಟೇಷನ್ ಗೆ ಹೋಗುತ್ತಿತ್ತು. ಈ ವೇಳೆ ಮಚ್ಚೇರಿಯ ಶ್ರೀರಂಗ ಕಾಂಕ್ರೀಟ್ ಪ್ರಾಡಕ್ಟ್ ಬಳಿ ಗಂಗೋಜಿರಾವ್ ತನ್ನ ಬೈಕ್ ನಿಲ್ಲಿಸಿಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಕಡೂರು ಕಡೆಯಿಂದ ಬಂದ ಸಿಂಗಟಗೆರೆ ಠಾಣೆಯ ಪೊಲೀಸ್ ಜೀಪ್ ಸ್ಲೂಟಿಗೆ ಡಿಕ್ಕಿಯಾಗಿ ಗಂಗೋಜಿರಾವ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತ್ತ ಪೊಲೀಸ್ ಜೀಪ್ ಚಾಲಕ ಜೀಪ್ ನಿಲ್ಲಿಸದೆ ಹೊರಟು ಹೋಗಿದ್ದಾನೆ. ಮೃತನ ಪತ್ನಿ ಸಂಬಂಧಿಕರು ಪೊಲೀಸ್ ಚಾಲಕನ ವರ್ತನೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿ ಚಾಲಕನನ್ನು ಬಂಧಿಸುವ ತನಕ ಶವ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ನದಿ ಹರಿವಾಗ ಕಸ, ಕಡ್ಡಿ ಅಡ್ಡ ಬರುತ್ತದೆ: ಬಿ.ವೈ.ವಿಜಯೇಂದ್ರ ಮಾರ್ಮಿಕ ಹೇಳಿಕೆ
ಚಾಲಕನನ್ನು ಸೇವೆಯಿಂದ ಅಮಾನತ್ತು ಮಾಡಿದ ಎಸ್ಪಿ: ಸ್ಥಳಕ್ಕೆ ಆಗಮಿಸಿದ ತರೀಕೆರೆ ಡಿವೈಎಸ್ಪಿ ಹಾಲಮೂರ್ತಿ ರಾವ್ ಮೃತರ ಕುಟುಂಬಸ್ಥರನ್ನ ಸಮಾಧಾನ ಮಾಡಿ ಶವವನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.ಅಫಘಾತಕ್ಕೆ ಕಾರಣವಾದ ಪೊಲೀಸ್ ಜೀಪನ್ನು ಕಡೂರು ಪೊಲೀಸರು ಸೀಜ್ ಮಾಡಿದ್ದು, ಜೀಪ್ ಚಾಲಕ ಶಿವಕುಮಾರ್ ನನ್ನು ಎಸ್ಪಿ ವಿಕ್ರಂ ಅಮ್ಟೆ ಅಮಾನತ್ತು ಮಾಡಿ ಆದೇಶಿಸಿದ್ದಾರೆ. ಜೀಪ್ ಚಾಲಕ ಶಿವಕುಮಾರ್ ನನ್ನ ಕಡೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ