
ಚಿಕ್ಕಮಗಳೂರು (ಜೂ.22): ಪೊಲೀಸ್ ವಿಚಾರಣೆಯ ನಂತರ ಯುವಕನೊಬ್ಬ ಆತ್ಮ*ಹ*ತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ನಡೆದಿದೆ. 20 ವರ್ಷದ ಚಂದನ್ ಮೃತ ದುರ್ದೈವಿ. ಮಾಹಿತಿಯ ಪ್ರಕಾರ, ಕುಡ್ಲೂರು ಗ್ರಾಮದ ಯುವತಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ತೆರಳಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಬೀರೂರು ಪೊಲೀಸರು, ಆಕೆಯ ಮೊಬೈಲ್‌ನಲ್ಲಿ ಚಂದನ್‌ನ ಸಂಪರ್ಕ ವಿವರಗಳು ಮತ್ತು ದೂರವಾಣಿ ಸಂಖ್ಯೆಯನ್ನು ಪತ್ತೆಹಚ್ಚಿದ್ದರು.
ಈ ಹಿನ್ನೆಲೆ ಚಂದನ್‌ನನ್ನು ವಿಚಾರಣೆಗೆ ಕರೆಸಿ ಹಲವು ಬಾರಿ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ನಿನ್ನೆ ಸಹ ವಿಚಾರಣೆಗೆ ಹಾಜರಾಗಿದ್ದ ಚಂದನ್‌ನನ್ನು ಬಳಿಕ ಪೊಲೀಸರು ಮನೆಗೆ ಕಳುಹಿಸಿದ್ದರು. ಆದರೆ ಸಂಜೆ ವೇಳೆಗೆ ಮನೆಗೆ ತೆರಳಿದ ಯುವಕ ಆತ್ಮ*ಹ*ತ್ಯೆಗೆ ಶರಣಾಗಿರುವುದು ಕುಟುಂಬಸ್ಥರು ಮತ್ತು ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.
ಸ್ಥಳೀಯರ ಪ್ರಕಾರ, ಯುವತಿ ಮನೆ ಬಿಟ್ಟು ಹೋಗಿದ್ದ ಪ್ರಕರಣಕ್ಕೆ ಚಂದನ್ ಕಾರಣ ಎನ್ನುವ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದುದು ಆತನ ಮನಸ್ಸಿನ ಮೇಲೆ ಪರಿಣಾಮ ಬೀರಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆತ್ಮ*ಹ*ತ್ಯೆಗೆ ಮುನ್ನ ಚಂದನ್ ತನ್ನ ತಾಯಿಗೆ ಸಂದೇಶವೊಂದನ್ನು ಕಳುಹಿಸಿದ್ದಾನೆ ಎನ್ನಲಾಗಿದೆ.
ಆದರೆ ಚಂದನ್ ಆತ್ಮ*ಹ*ತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸ್ ವಿಚಾರಣೆಯ ಒತ್ತಡವೇ ಕಾರಣವೋ, ಅಥವಾ ಬೇರೆ ಯಾವುದೇ ವೈಯಕ್ತಿಕ ಕಾರಣಗಳಿವೆಯೋ ಎಂಬುದು ತನಿಖೆಯಿಂದಲೇ ತಿಳಿದುಬರಬೇಕಿದೆ. ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಯುವಕನ ಸಾವಿನ ಹಿಂದಿನ ನಿಜವಾದ ಕಾರಣ ಏನು ಎಂಬುದು ತನಿಖೆ ಪೂರ್ಣಗೊಂಡ ಬಳಿಕವೇ ಬಹಿರಂಗವಾಗಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ