ಮಗು ಅಪಹರಣ ಪ್ರಕರಣ ಭೇದಿಸಿದ ಮುನಿರಾಬಾದ್ ಪೊಲೀಸರು

Published : Jul 02, 2023, 05:41 AM IST
ಮಗು ಅಪಹರಣ ಪ್ರಕರಣ ಭೇದಿಸಿದ ಮುನಿರಾಬಾದ್ ಪೊಲೀಸರು

ಸಾರಾಂಶ

ಸಮೀಪದ ಪುಣ್ಯಕ್ಷೇತ್ರ ಶ್ರೀಹುಲಿಗೆಮ್ಮ ದೇವಸ್ಥಾನದ ತಂಗುದಾಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮಗುವನ್ನು ಅಪಹರಿಸಿದ ಪ್ರಕರಣವನ್ನು ಪೊಲೀಸರು ವಾರದಲ್ಲಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುನಿರಾಬಾದ್‌ (ಜು.2) : ಸಮೀಪದ ಪುಣ್ಯಕ್ಷೇತ್ರ ಶ್ರೀಹುಲಿಗೆಮ್ಮ ದೇವಸ್ಥಾನದ ತಂಗುದಾಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮಗುವನ್ನು ಅಪಹರಿಸಿದ ಪ್ರಕರಣವನ್ನು ಪೊಲೀಸರು ವಾರದಲ್ಲಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೂ.23ರಂದು ಬಾಲಕ ಸಂತೋಷ ತನ್ನ ತಾಯಿಯೊಂದಿಗೆ ಹುಲಿಯಮ್ಮ ದೇವಿ ದರ್ಶನಕ್ಕೆ ಬಂದು ತಂಗುದಾಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಸಂತೋಷನನ್ನು ಅಪರಿಚಿತ ಮಹಿಳೆ ಅಪಹರಿಸಿಕೊಂಡುಹೋಗಿದ್ದಳು. ಈ ಕುರಿತು ಬಾಲಕನ ತಾಯಿ ಲಕ್ಷ್ಮೇ ಎಂಬವರು ಮುನಿರಾಬಾದ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೊಪ್ಪಳ ಎಸ್ಪಿ ಯಶೋದಾ ಒಂಟಗೋಡಿ ತಂಡ ರಚಿಸಿದರು. ಎಸ್ಪಿ ಯಶೋದಾ ಹಾಗೂ ಡಿಎಸ್‌ಪಿ ಶರಣಪ್ಪ ಸುಬೇದಾರ ಮಾರ್ಗದರ್ಶನದಲ್ಲಿ ಹಾಗೂ ಕೊಪ್ಪಳ ಗ್ರಾಮೀಣ ಸಿಪಿಐ ಮಾಂತೇಶ್‌ ಸಜ್ಜನ್‌ ನೇತೃತ್ವದಲ್ಲಿ ಮುನಿರಾಬಾದ್‌ ಪೊಲೀಸರು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಕ್ತಿ ಯೋಜನೆ ಎಫೆಕ್ಟ್: ಹುಲಿಗಿ ದೇವಸ್ಥಾನದ ಹುಂಡಿಯಲ್ಲಿ ₹99.70 ಲಕ್ಷ ಕಾಣಿಕೆ ಸಂಗ್ರಹ!

ಅಪಹರಣಗೊಳಗಾದ ನಾಲ್ಕು ವರ್ಷದ ಮಗು ಸಂತೋಷನನ್ನು ತಾಯಿ ಮಡಲಿಗೆ ಒಪ್ಪಿಸಿದ್ದಾರೆ. ಮಗುವನ್ನು ಅಪಹರಣ ಮಾಡಿದ ಚಾಲಾಕಿ ಮಹಿಳೆ ಎಲ್ಲಮ್ಮನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!