ಬೆಳಗಾವಿ;  ಬಾಲಕಿಯರು ಗರ್ಭಿಣಿ; ಗಂಡಂದಿರ ಮೇಲೆ ಪೋಕ್ಸೋ ಕೇಸ್

Published : Feb 24, 2021, 09:55 PM ISTUpdated : Feb 24, 2021, 09:57 PM IST
ಬೆಳಗಾವಿ;  ಬಾಲಕಿಯರು ಗರ್ಭಿಣಿ; ಗಂಡಂದಿರ ಮೇಲೆ ಪೋಕ್ಸೋ ಕೇಸ್

ಸಾರಾಂಶ

ಲಾಕ್‌ಡೌನ್ ವೇಳೆ ಬಾಲ್ಯವಿವಾಹವಾಗಿ ಬಾಲಕಿಯರ ಗರ್ಭಿಣಿ ಮಾಡಿದ ಪತಿಯಂದಿರು/ ಇಬ್ಬರು ಪತಿಯಂದಿರ ವಿರುದ್ಧ ಪೋಕ್ಸೋ ಪ್ರಕರಣದಡಿ ಕೇಸ್ ದಾಖಲು/ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು ಎರಡು ತಿಂಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ/ ಬೆಳಗಾವಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ದೂರಿನ ಮೇರೆಗೆ ಕೇಸ್

ಬೆಳಗಾವಿ(ಫೆ. 24)  ಇದೊಂದು ವಿಚಿತ್ರ ಪ್ರಕರಣ. ಲಾಕ್‌ಡೌನ್ ವೇಳೆ ಬಾಲ್ಯವಿವಾಹವಾಗಿದ್ದ ಬಾಲಕಿಯರು ಗರ್ಭಿಣಿಯರಾಗಿದ್ದಾರೆ. ಅದಕ್ಕೆ ಅವರ ಗಂಡಂದಿರೆ ಕಾರಣ!

ಇಬ್ಬರು ಪತಿಯಂದಿರ ವಿರುದ್ಧ ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಾಗಿದೆ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಾಗಿದೆ. ಎರಡು ತಿಂಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ದೂರಿನ ಮೇರೆಗೆ ಕೇಸ್ ದಾಖಲಿಸಲಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಪತಿಯಂದಿರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಗರ್ಭಿಣಿಯಾದ ಇಬ್ಬರು ಬಾಲಕಿಯರು ಹೆರಿಗೆಗೆಂದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾಗ ವಿಚಾರ ಬಯಲಾಗಿದೆ.

ಬಾಡಿಗೆ ಮನೆ ಸುಂದರಿ; ಪತ್ನಿಯ ಮೊಬೈಲ್‌ಗೆ ಗಂಡನ ರಾಸಲೀಲೆ ವಿಡಿಯೋ

ಆಧಾರ್ ಕಾರ್ಡ್‌ನಲ್ಲಿ ನಮೂದಾದ ಜನ್ಮ ದಿನಾಂಕ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 16 ಹಾಗೂ 17 ವರ್ಷದ ಇಬ್ಬರು ಬಾಲಕಿಯರು ಗರ್ಭಿಣಿಯಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ತಕ್ಷಣ ಸಂತ್ರಸ್ತ ಬಾಲಕಿಯರ ಭೇಟಿಯಾಗಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.

ಸಂತ್ರಸ್ತೆಯರ ಬಳಿ ಮಾಹಿತಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರವೀಂದ್ರ ರತ್ನಾಕರ ಮಾಹಿತಿ ಪಡೆದುಕೊಂಡಿದ್ದಾರೆ. ಪತಿಯರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ನೀಡಿದ್ದಾರೆ. 2020ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಒಟ್ಟು 115 ಬಾಲ್ಯವಿವಾಹ ದೂರುಗಳು  ಬಂದಿವೆ. ಈ ಪೈಕಿ ಬೆಳಗಾವಿ ಜಿಲ್ಲೆಯಲ್ಲಿ 108 ಬಾಲ್ಯವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ ಎಂಬುದು ಗಮನಾರ್ಹ.

ಬಾಲಕಿಯರ ಕುಟುಂಬಸ್ಥರಿಗೆ ತಿಳಿಹೇಳಿ ವಿದ್ಯಾಭ್ಯಾಸ ಮುಂದುವರಿಸಲು ತಿಳಿಸಲಾಗಿದೆ ಎಂದು ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ದೂರವಾಣಿ ಮೂಲಕ ರವೀಂದ್ರ ರತ್ನಾಕರ ಮಾಹಿತಿ  ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು
ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು