ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಾರದ ರೀತಿಯಲ್ಲಿ ಬಾಲ್ಯವಿವಾಹ ಪ್ರಕರಣಗಳು ನಡೆಯುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತವೂ ಕಟ್ಟು ನಿಟ್ಟಿನ ಕ್ರಮದ ನಡುವೆಯೂ 68 ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ಜೀವಂತವಾಗಿದೆ.
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಆ.16): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಾರದ ರೀತಿಯಲ್ಲಿ ಬಾಲ್ಯವಿವಾಹ ಪ್ರಕರಣಗಳು ನಡೆಯುತ್ತಿದ್ದು , ಇದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತವೂ ಕಟ್ಟು ನಿಟ್ಟಿನ ಕ್ರಮದ ನಡುವೆಯೂ 68 ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲ್ಯವಿವಾಹದ ಪ್ರಕರಣಗಳು ಅಧಿಕವಾಗಿದೆ. ಜಿಲ್ಲೆಯಲ್ಲಿ 68 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೆಚ್ಚಾಗಿ ಬಾಲ್ಯವಿವಾಹ ಪ್ರಕರಣಗಳು ವರದಿಯಾಗುತ್ತಿದ್ದು, ಈ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತೀವ್ರ ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದರು. ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮಿತಿಗಳ ಮೊದಲ ತ್ರೈಮಾಸಿಕ ಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಾಲ್ಯ ವಿವಾಹ ಸಂಬಂಧಿಸಿದ ಪ್ರಕರಣಗಳಲ್ಲಿ ಪೋಕ್ಸೋ ಕಾಯ್ದೆಯನ್ನು ದಾಖಲಿಸಬೇಕೆಂದು ಸಂಬಂಧಿಸಿ ಇಲಾಖೆ ಅಧಿಕಾರಿಗೆ ಎಂದು ಸೂಚಿಸಿದರು. ಕಳೆದ ವರ್ಷದ ಮೊದಲ ತ್ರೈಮಾಸಿಕಕ್ಕಿಂತ ಈವರ್ಷ ವರದಿಯಾಗಿರುವ ಬಾಲ್ಯವಿವಾಹ ದೂರುಗಳ ಸಂಖ್ಯೆ ಅಧಿಕವಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಶಾಲೆಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ವ್ಯಾಪಕವಾಗಿ ಜನಜಾಗೃತಿ ಮೂಡಿಸಲು ಮುಂದಾಗಬೇಕೆಂದು ಹೇಳಿದರು.
ಮೊದಲ ತ್ರೈಮಾಸಿಕದಲ್ಲಿ ದಾಖಲಾಗಿರುವ 28 ಕೌಟುಂಬಿಕ ಹಿಂಸೆ ಪ್ರಕರಣಗಳಲ್ಲಿ, 21 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. ಸಂರಕ್ಷಣಾಧಿಕಾರಿಗಳ ಹಂತದಲ್ಲಿಯೇ 14 ಪ್ರಕರಣಗಳು ಬಾಕಿ ಉಳಿದಿದ್ದು, ಪ್ರಕರಣಗಳು ದಾಖಲಾದ 30 ದಿನಗಳ ಅವಧಿಯಲ್ಲಿ ಇತ್ಯರ್ಥಗೊಳಿಸಲು ಸೂಚಿಸಿದರು.
ಬಾಲ್ಯವಿವಾಹಕ್ಕೆ ಒತ್ತಾಯಿಸಿ ಕೋಣೆಯಲ್ಲಿ ಕೂಡಿ ಹಾಕಿದ್ದ ಬಾಲಕಿ ಎಸ್ಕೇಪ್, SSLC ಪರೀಕ್ಷೆಗೆ ಹಾಜರ್!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಅಂಗನವಾಡಿಗಳಿಗೆ ಹಾಗೂ ಇಲಾಖೆಯಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳಿಗೆ ನಿರಂತರವಾಗಿ ಭೇಟಿ ನೀಡಿ ಪರಿಶೀಲಿಸಬೇಕೆಂದು ತಿಳಿಸಿದರು. ಪ್ರಸಕ್ತ ವರ್ಷ ದಾಖಲಾಗಿರುವ 26 ಬಾಲ್ಯವಿವಾಹ ದೂರುಗಳಲ್ಲಿ 25 ಬಾಲ್ಯವಿವಾಹಗಳನ್ನು ತಡೆಗಟ್ಟಿ ಒಬ್ಬರನ್ನು ಸ್ವಯಂ ಸೇವಾ ಸಂಸ್ಥೆಯು ನೋಡಿಕೊಳ್ಳುತ್ತಿದೆ. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಈ ಹಿಂದೆ ಎಫ್.ಐ.ಆರ್ ದಾಖಲಾದ 17 ಪ್ರಕರಣಗಳಲ್ಲಿ, 12 ಪ್ರಕರಣಗಳಲ್ಲಿ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
Davanagere; ನಾಲ್ಕು ಬಾಲ್ಯವಿವಾಹಕ್ಕೆ ಬ್ರೇಕ್, ಕಣ್ತಪ್ಪಿಸಿ ಮದುವೆಯಾದವ ಅರೆಸ್ಟ್
18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ನೀಡಲು ಸ್ವಾಧಾರ ಗೃಹ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಅನುಷ್ಠಾನಗೊಳಿಸಿತ್ತಿರುವ ಕಸ್ತೂರಿ ಬಾ ಸದನ ಸ್ವಯಂ ಸೇವಾ ಸಂಸ್ಥೆಗೆ ಅನುದಾನ ನೀಡುವಲ್ಲಿ ವಿಳಂಬವಾಗುತ್ತಿದೆ. ಸಕಾಲದಲ್ಲಿ ಅನುದಾನವನ್ನು ಬಿಡುಗೊಳಿಸಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಕಸ್ತೂರಿ ಬಾ ಸದನದ ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ ಮನವಿ ಮಾಡಿದರು.