
ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು
ಕೊಡಗು (ಆ.05): ಇವರಿಬ್ಬರೂ ಎಂದೆಂದಿಗೂ ಒಬ್ಬರನ್ನೊಬ್ಬರು ಬಿಟ್ಟಿರಲಾರದ ಸ್ನೇಹಿತರು. ಜೊತೆಯಲ್ಲೇ ಪ್ರಯಾಣಿಸುತ್ತಿರುವಾಗಲೇ ಜೊತೆಯಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಕೊಯನಾಡು ಬಳಿ ನಡೆದಿದೆ. ಮೈಸೂರು ಮೂಲದ ಪವನ್ ಮತ್ತು ಮನೋಜ್ ಜೊತೆಯಲ್ಲೇ ಸಾವಿನ ಮನೆ ಸೇರಿದ ಸ್ನೇಹಿತರು. ಇವರಿಬ್ಬರು ಭಾನುವಾರ ರಾತ್ರಿ ಬೈಕ್ ಏರಿ ಮೈಸೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದರು ಎನ್ನಲಾಗಿದೆ.
ಈ ವೇಳೆ ರಾತ್ರಿ 9 ಗಂಟೆ ಸಮಯಕ್ಕೆ ಮಡಿಕೇರಿ ತಾಲ್ಲೂಕಿನ ಕೊಯನಾಡು ಬಳಿ ಇವರ ಬೈಕು ಅಪಘಾತವಾಗಿರಬಹುದು ಎನ್ನಲಾಗಿದೆ. ಇವರ ಬೈಕು ರಸ್ತೆ ಬದಿಯ ಸಣ್ಣ ಸೇತುವೆಗೆ ಡಿಕ್ಕಿ ಹೊಡೆದಿರಬಹುದು ಎಂದು ಅಂದಾಜಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಅಪಘಾತ ಆಗುತ್ತಿದ್ದಂತೆ ಬೈಕು ಸಹಿತ ಇಬ್ಬರು ಹಾರಿ ಚರಂಡಿಗೆ ಬಿದ್ದಿದ್ದಾರೆ. ಇಬ್ಬರಿಗೂ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ ರಾತ್ರಿ ಆಗಿದ್ದರಿಂದ ಘಟನೆ ಯಾರಿಗೂ ಗೊತ್ತಾಗಿಲ್ಲ.
ಕರಾವಳಿ ಮತ್ತು ಮಲೆನಾಡಿಗೆ 300 ಕೋಟಿ ಅನುದಾನ ನೀಡಲು ಸಿಎಂ ಒಪ್ಪಿಗೆ: ಸಚಿವ ಕೃಷ್ಣ ಭೈರೇಗೌಡ
ಆದರೆ ಬೆಳಿಗ್ಗೆ ಸ್ಥಳೀಯರು ಓಡಾಡುವ ವೇಳೆ ಘಟನೆ ಬೆಳಕಿಗೆ ಬಂದಿದೆ. ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಸತ್ತು ಬಿದ್ದಿರುವುದನ್ನು ಗಮನಿಸಿ ಸ್ಥಳೀಯರಾದ ಹನೀಫ್ ಎಂಬುವರಿಗೆ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಮಡಿಕೇರಿ ಗ್ರಾಮಾಂತರ ಪೊಲೀಸರು ಎಲ್ಲವನ್ನು ಪರಿಶೀಲನೆ ನಡೆಸಿ ಮೃತರ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೃತದೇಹಗಳನ್ನು ಮಡಿಕೇರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ಶವಗಳನ್ನು ಕುಟುಂಬದವರಿಗೆ ಹಸ್ತಾಂತರ ಮಾಡಿದ್ದಾರೆ. ಘಟನೆ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ