
ಬೆಂಗಳೂರು (ಮೇ 2): ಚಿತ್ರದುರ್ಗದಿಂದ ದುಡಿಮೆಗಾಗಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿ ಕೋರಿಯರ್ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಯುವಕನ ಮೃತದೇಹವು ನಾಗರಬಾವಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಯುವಕನನ್ನು ಚಿತ್ರದುರ್ಗ ಮೂಲದ ನವೀನ್ (24) ಎಂದು ಗುರುತಿಸಲಾಗಿದೆ. ಖಾಸಗಿ ಕೊರಿಯರ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಆದರೆ, ನಿನ್ನೆ (ಸೋಮವಾರ) ಮಧ್ಯಾಹ್ನ 3 ಗಂಟೆ ಸುಮಾರಿಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರಭಾವಿಯಲ್ಲಿ, ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನವೀನ್ ಮೃತದೇಹವನ್ನು ಇಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಮೃತ ದೇಹವನ್ನು ಆತನ ಕುಟುಂಬಸ್ತರಿಗೆ ಹಸ್ತಾಂತರ ಮಾಡಲಾಗುತ್ತದೆ.
ಬೆಂಗಳೂರು ರೇವಾ ಕಾಲೇಜು ವಿದ್ಯಾರ್ಥಿ ಕೊಲೆಗೆ ಬಿಗ್ ಟ್ವಿಸ್ಟ್: ಮೋಜಿಗಾಗಿ ಚಾಕು ಚುಚ್ಚಿದ ಆರೋಪಿ!
ಪೊಲೀಸರಿಂದ ಸ್ಥಳ ಪರಿಶೀಲನೆ: ಯುವಕನ ಮೃತದೇಹ ಪತ್ತೆಯಾದ ಬೆನ್ನಲ್ಲೇ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನು ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಅಥವಾ ಇತರೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳ ಮಹಜರ್ ನಂತರ ಪೊಲೀಸರು ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಇನ್ನು ಈ ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಿರುವ ಪೊಲೀಸರು ಸಾವಿನ ಬಗ್ಗೆ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಮೃತ ಯುವಕನ ಫೋನ್ ಕರೆಗಳು ಹಾಗೂ ಚಾಟಿಂಗ್ ಸೇರಿದಂತೆ ಮಾಹಿತಿ ಕಲೆಹಾಕಲಾಗಿದೆ. ಉಳಿದಂತೆ ಆತ ಕೆಲಸ ಮಾಡುತ್ತಿದ್ದ ಕಂಪನಿ ಸೇರಿ, ಆತನು ಸ್ನೇಹಿತರೊಂದಿಗೆ ಇದ್ದ ಮಾಹಿತಿ ಪಡೆಯು ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ.
ಬೆಂಗಳೂರು ರೇವಾ ಕಾಲೇಜು ವಿದ್ಯಾರ್ಥಿ ಕೊಲೆಗೆ ಟ್ವಿಸ್ಟ್: ಬೆಂಗಳೂರು (ಮೇ 2): ಬೆಂಗಳೂರಿನ ಪ್ರತಿಷ್ಠಿತ ರೇವಾ ಕಾಲೇಜಿನ ಫೆಸ್ಟ್‌ನಲ್ಲಿ ಗುಜರಾತ್ ಮೂಲದ ಇಂಜನಿಯರಿಂಗ್ ವಿದ್ಯಾರ್ಥಿ ಕೊಲೆಗೆ ಮೂರು ದಿನಗಳ ನಂತರ ಭರ್ಜರಿ ಟ್ವಿಸ್ಟ್ ಸಿಕ್ಕಿದೆ. ಏಪ್ರಿಲ್ 28ರ ರಾತ್ರಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ‘ರೇವೋತ್ಸವ’ ಹೆಸರಿನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆಯುತ್ತಿದ್ದ ಜಗಳದ ವೇಳೆ ಜೋಶ್ ಸಿಗುತ್ತಿಲ್ಲವೆಂದು, ಎದುರಾಳಿ ಯುವಕನ ಎದೆಗೆ ಚಾಕು ಚುಚ್ಚಲಾಗಿದೆ. ಆದರೆ, ರಕ್ತಸ್ರಾವಗೊಂಡ ವಿದ್ಯಾರ್ಥಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.
ಮಂಗ್ಳೂರ್ ಮುಸ್ಲಿಂ ಹುಡುಗಿ- ಬಳ್ಳಾರಿ ಹಿಂದೂ ಹುಡ್ಗ: ಬೆಂಗ್ಳೂರಲ್ಲಿ ಲವ್ ಮಾಡ್ತಾ ಸತ್ತೇ ಹೋದ ಯುವತಿ!
ಮೋಜಿಗಾಗಿ ಚಾಕು ಚುಚ್ಚಿದ ಯುವಕ: ಕಾಲೇಜು ಉತ್ಸವದ ವೇಳೆ ಸಾವಿರಾರು ವಿದ್ಯಾರ್ಥಿಗಳು ಖುಷಿಯಲ್ಲಿ ತೇಲಾಡುತ್ತಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು. ಆಗ ಜಗಳದಲ್ಲಿ ಹೆಚ್ಚಿನ ಜೋಶ್ ಬರಬೇಕು ಎಂದು ಇಂಜಿನಿಯಿಂಗ್ ವಿದ್ಯಾರ್ಥಿ ಭರತ್ ಜೆಟ್ಟಿ (22) ಎಂಬಾತನ ಎದೆಗೆ ಬಿಕಾಂ ಓದುತ್ತಿದ್ದ ಅನಿಲ್ ಎಂಬಾತ ಚಾಕುವನ್ನು ಚುಚ್ಚಿದ್ದಾನೆ. ದುರಾದೃಷ್ಟ ಎಂಬಂತೆ ಯುವಕನ ಎದೆಗೆ ತೂರಿಸಿದ್ದ ಚಾಕು ಆತನ ಜೀವವನ್ನೇ ತೆಗೆದು ಹಾಕಿತ್ತು. ಈ ಘಟನೆಯ ಬೆನ್ನಲ್ಲೇ ಕೊಲೆ ಆರೋಪಿಗಳು ಕಾರಿನಲ್ಲಿ ಮೂಡಿಗೆರೆಗೆ ಪರಾರಿಯಾಗಿದ್ದು, ಅರಣ್ಯದ ತಗ್ಗು ಪ್ರದೇಶವೊಂದರಲ್ಲಿ ತಲೆಮರೆಸಿಕೊಂಡಿದ್ದರು. ಈಗ ಪೊಲೀಸರ ಅತಿಥಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ