ಚಿತ್ರದುರ್ಗದ ಮುರುಘಾ ಶರಣರ (Murugha Shri) ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮುಂದೂಡಿದೆ.
ಚಿತ್ರದುರ್ಗ, (ಸೆಪ್ಟೆಂಬರ್.01): ಫೋಕ್ಸೋ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶರಣರ (Murugha Shri) ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮುಂದೂಡಿದೆ.
ಇಂದು(ಸೆಪ್ಟೆಂಬರ್ 01) ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಚಿತ್ರದುರ್ಗ ಸೆಷನ್ ಕೋರ್ಟ್, ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಅಂದ್ರೆ ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಅಲ್ಲದೇ ಆಕ್ಷೇಪಣೆ ಸಲ್ಲಿಸಲು ಪಿಪಿಗೆ ಅವಕಾಶ ನೀಡಿ ವಿಚಾರಣೆ ಮುಂದೂಡಿದೆ. ಇದರಿಂದ ಮುರುಘಾ ಶರಣಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ.
Muruga Mutt ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ!
ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದೆ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳ ವಿರುದ್ಧ ಫೋಕ್ಸೋ ಕಾಯ್ದೆ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳು ಜಾಮೀನು ಅರ್ಜಿ ಸಲ್ಲಿಸಿದ್ದರು.
ಶುಕ್ರವಾರ ತಕರಾರು ಅರ್ಜಿ ಸಲ್ಲಿಕೆ
ಇನ್ನು ಈ ತಕರಾರು ಅರ್ಜಿ ಸಲ್ಲಿಸುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಾಲಕಿಯರ ಪರ ವಕೀಲ ಶ್ರೀನಿವಾಸ್, ಮುರುಘಾ ಶ್ರೀಗಳು ಯಾವ ಗ್ರೌಂಡ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೋ ಪರಿಶೀಲಿಸಿ ನಾಳೆ(ಶುಕ್ರವಾರ) ತಕರಾರು ಅರ್ಜಿ ಸಲ್ಲಿಕೆ ಮಾಡಲಾಗುತ್ತದೆ. ನೊಂದ ಬಾಲಕಿಯರ ಪರವಾಗಿ ಕಾನೂನು ಪ್ರಾಧಿಕಾರದ ವಕೀಲರು ವಕಾಲತ್ತು ಹಾಕಿದ್ದರು. ನಾವು ಕೂಡ ವಕಾಲತ್ತು ಹಾಕಿದ್ದೇವೆ, ಬಾಲಕಿಯರು ನಮ್ಮನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದರು.
ನ್ಯಾಯಾಧೀಶರ ಮುಂದೆಯೇ ಬಾಲಕಿಯರು ನಮ್ಮನ್ನು ಅವರ ಪರ ವಕೀಲರಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಶರಣರ ಜಾಮೀನು ಅರ್ಜಿ ಬಗ್ಗೆ ಸಂತ್ರಸ್ತರಿಗೆ ಮತ್ತು ಪಿಪಿಗೆ ಇಂದು ನೋಟಿಸ್ ಬಂದಿತ್ತು. ಹಾಗಾಗಿ ಇಂದು ತಕರಾರು ಸಲ್ಲಿಸಲು ಅವಕಾಶ ಇರಲಿಲ್ಲ ಎಂದು ಮಾಹಿತಿ ನೀಡಿದರು.
ಮರುಘಾ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ, ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಮುಖಂಡನ ಮಹತ್ವದ ಹೇಳಿಕೆ!
ಅಟ್ರಾಸಿಟಿ ಕೇಸ್ ದಾಖಲು
ಮುರುಘಾ ಮಠದ ಶಿವಮೂರ್ತಿ ಶ್ರೀಗಳ ವಿರುದ್ಧ ಪೋಕ್ಸೊ (Protection of Children from Sexual Offences Act) ಕಾಯ್ದೆಯ ಜತೆಗೆ ದಲಿತ ದೌರ್ಜನ್ಯ ಪ್ರಕರಣವನ್ನೂ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿನಿಗಳಲ್ಲಿ ಒಬ್ಬರು ದಲಿತ ಸಮುದಾಯಕ್ಕೆ ಸೇರಿರುವ ಹಿನ್ನೆಲೆ ಪೋಕ್ಸೊ ಜತೆಗೆ ಅಟ್ರಾಸಿಟಿ ಪ್ರಕರಣವನ್ನೂ ದಾಖಲಿಸಲಾಗಿದೆ. ಈ ಸಂಬಂಧ ಯುವತಿಯ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪರಿಶಿಷ್ಟ ಜಾತಿಯ ಸಮುದಾಯದ ಹುಡುಗಿಯಾಗಿರುವ ಹಿನ್ನೆಲೆ ದಲಿತ ದೌರ್ಜನ್ಯ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ.
ಘಟನೆ ಹಿನ್ನೆಲೆ
ಪ್ರಕರಣವನ್ನು ದಾಖಲಿಸಿದ ಒಡನಾಡಿ ಸಂಸ್ಥೆಯ ಕೌನ್ಸಿಲರ್ ಸರಸ್ವತಿ ದೂರು ದಾಖಲಾದ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಜೊತೆಗೆ ಮಾತನಾಡಿ "ಜುಲೈ 24ರಂದು ಮಕ್ಕಳು ದೌರ್ಜನ್ಯದಿಂದ ಬೇಸತ್ತು ಬೆಂಗಳೂರಿಗೆ ಬಂದಿದ್ದಾರೆ. ಹಾಸ್ಟೆಲ್ ನಿಂದ ಅವರನ್ನು ಹೊರ ಹಾಕಲಾಗಿತ್ತಂತೆ. ಅಲ್ಲಿ ಬಹಳಷ್ಟು ಸಮಯ ಒಂದೇ ಕಡೆ ನಿಂತಿದ್ದರಿಂದ ಆಟೋ ಚಾಲಕರೊಬ್ಬರು ಅವರನ್ನು ವಿಚಾರಿಸಿ, ಸಮೀಪದ ಕಾಟನ್ ಪೇಟೆ ಪೊಲೀಸ್ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಮಕ್ಕಳು ಯಾರನ್ನು ಭೇಟಿ ಮಾಡಿದ್ರು ಅನ್ನೋ ಮಾಹಿತಿ ನಮಗಿಲ್ಲ. ಮಕ್ಕಳು ಭಯದ ಕಾರಣಕ್ಲೆ ತಮ್ಮ ಮೇಲೆ ಆಗಿರೋ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಲ್ಲ. ಸ್ವಾಮೀಜಿಯವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾರೆ. ಕೆಟ್ಟದಾಗಿ ನಿಂದಿಸುತ್ತಾರೆ ಎಂದಷ್ಟೇ ಹೇಳಿದ್ದಾರೆ.
ಪೊಲೀಸರಿಂದ ನ್ಯಾಯ ಸಿಗುತ್ತೆ ಎಂಬ ಖಾತ್ರಿ ಇದ್ದಿದ್ದರೆ ಆ ಮಕ್ಕಳು ನಮ್ಮ ತನಕ ಬರುತ್ತಿರಲಿಲ್ಲ.ಹೀಗಾಗಿ ಆ ಮಕ್ಕಳು ಬೇರೊಬ್ಬರ ಸಹಾಯ ಪಡೆದು ನಮ್ಮ ಬಳಿ ಬಂದಿದ್ದಾರೆ. ಮಕ್ಕಳು ಮಾನಸಿಕ ಸ್ಥಿತಿ ಧೃಡವಾಗಿಯೇನೂ ಇಲ್ಲ.ತುಂಬಾ ಹೆದರಿಕೆಯಿಂದಲೇ ನಮ್ಮ ಬಳಿ ಆಗಿರೋ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಾರೆ. ಮಕ್ಕಳ ಹೇಳಿಕೆಯಲ್ಲಿ ಸತ್ಯ ಇರಬಹುದು, ಇಲ್ಲದೆಯೂ ಇರಬಹುದು. ಪ್ರಕರಣದ ಸೂಕ್ತ ತನಿಖೆ ಆಗಲಿ," ಎಂದು ಹೇಳಿದ್ದರು.