ಅಧಿಕಾರಿ ಸಾವು: ಶಿವಮೊಗ್ಗದಲ್ಲಿ ಸಿಐಡಿ ತಂಡ ತನಿಖೆ

By Kannadaprabha News  |  First Published May 29, 2024, 11:36 AM IST

ಚಂದ್ರಶೇಖರನ್‌ರಿಗೆ ಸಂಬಂಧಿಸಿದ ದಾಖಲೆ ಪರಿಶೀಲಿಸಿ ಸಾಕ್ಷಾಧಾರಗಳನ್ನು ಕಲೆಹಾಕಿದ ಸಿಐಡಿ ಅಧಿಕಾರಿಗಳು ಸಾಕ್ಷಾಧಾರ ಪರಿಶೀಲನೆ ವೇಳೆ ದೊರಕಿದ ಚಂದ್ರಶೇಖರನ್ ಬ್ಯಾಗ್‌, ಬ್ಯಾಗ್‌ನಲ್ಲಿದ್ದ ಪೆನ್ ಡ್ರೈವ್ ಹಾಗೂ ಲ್ಯಾಪ್‌ಟಾಪ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪೆನ್‌ ಡ್ರೈವ್‌ ಮೇಲೆ ಪದ್ಮನಾಭ್‌ ಎಂದು ಬರೆದಿದೆ ಎನ್ನಲಾಗಿದೆ. ಇನ್ನು ಪೆನ್‌ ಒಂದನ್ನು ವಶಕ್ಕೆ ಪಡೆಯಲಾಗಿದೆ. 


ಶಿವಮೊಗ್ಗ(ಮೇ.29):  ವಾಲ್ಮೀಕಿ ನಿಗಮ ಮಂಡಳಿ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸಿಐಡಿ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ವಿನೋಬನಗರದಲ್ಲಿರುವ ಅವರ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್‌ಪಿ ಮೊಹಮ್ಮದ್‌ ರಫಿ ನೇತೃತ್ವದ ಆರು ಮಂದಿ ತಂಡ ಭೇಟಿ ನೀಡಿ, ಮೃತ ಅಧಿಕಾರಿ ಚಂದ್ರಶೇಖರನ್ ಪತ್ನಿ ಕವಿತಾರಿಂದ ಮಾಹಿತಿ ಸಂಗ್ರಹಿಸಲಾಗಿದೆ.

ಚಂದ್ರಶೇಖರನ್‌ರಿಗೆ ಸಂಬಂಧಿಸಿದ ದಾಖಲೆ ಪರಿಶೀಲಿಸಿ ಸಾಕ್ಷಾಧಾರಗಳನ್ನು ಕಲೆಹಾಕಿದ ಸಿಐಡಿ ಅಧಿಕಾರಿಗಳು ಸಾಕ್ಷಾಧಾರ ಪರಿಶೀಲನೆ ವೇಳೆ ದೊರಕಿದ ಚಂದ್ರಶೇಖರನ್ ಬ್ಯಾಗ್‌, ಬ್ಯಾಗ್‌ನಲ್ಲಿದ್ದ ಪೆನ್ ಡ್ರೈವ್ ಹಾಗೂ ಲ್ಯಾಪ್‌ಟಾಪ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪೆನ್‌ ಡ್ರೈವ್‌ ಮೇಲೆ ಪದ್ಮನಾಭ್‌ ಎಂದು ಬರೆದಿದೆ ಎನ್ನಲಾಗಿದೆ. ಇನ್ನು ಪೆನ್‌ ಒಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Latest Videos

undefined

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 80-85 ಕೋಟಿ ಲೂಟಿ ಆರೋಪ: ಅವ್ಯವಹಾರಕ್ಕೆ ಬೆದರಿ ಅಧಿಕಾರಿ ಆತ್ಮಹತ್ಯೆ!

ಸಿಐಡಿ ಅಧಿಕಾರಿಗಳು ಭೇಟಿ ನೀಡಿದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಚಂದ್ರಶೇಖರನ್‌ ಪತ್ನಿ ಕವಿತಾ, ಸಿಐಡಿ ಅಧಿಕಾರಿಗಳು ಸುಮಾರು 45 ನಿಮಿಷ ವಿಚಾರಣೆ ನಡೆಸಿದರು. ಮನೆಯಲ್ಲಿದ್ದ ಪದ್ಮನಾಭ ಹೆಸರಿನ ಪೆನ್‌ ಡ್ರೈವ್‌ ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಏನಿದೆ ಎಂದು ಕೇಳಿದರೂ ಅಧಿಕಾರಿಗಳು ತೋರಿಸಿದೆ ಹಾಗೆ ಹೋದರು. ವಶಪಡಿಸಿಕೊಂಡ ವಸ್ತುಗಳ ಕುರಿತ ಮಹಜರು ಸಹಿಗೆ ಅರ್ಧ ಗಂಟೆ ಬಿಟ್ಟು ಪೊಲೀಸ್ ಠಾಣೆಗೆ ಬರುವಂತೆ ಹೇಳಿ ಹೋಗಿದ್ದಾರೆ. ಅಧಿಕಾರಿಗಳ ಈ ನಡೆ ಅನುಮಾನ ಹುಟ್ಟಿಸಿದೆ ಎಂದು ಚಂದ್ರಶೇಖರ್ ಕುಟುಂಬಸ್ಥರು ತಿಳಿಸಿದ್ದಾರೆ.

click me!