ತುಮಕೂರು: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಮನನೊಂದು ಪೌರ ಕಾರ್ಮಿಕ ಆತ್ಮಹತ್ಯೆ

By Girish Goudar  |  First Published Nov 2, 2024, 8:56 PM IST

ಅರುಣ್ ಕುಮಾರ್ ಗುಬ್ಬಿ ಪಟ್ಟಣ ಪಂಚಾಯತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಅರುಣ್ ಕುಮಾರ್ 1 ಲಕ್ಷ ಹಣವನ್ನ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದರು. ಸಾಲ ಪಡೆದಿದ್ದ 1 ಲಕ್ಷ ಹಣಕ್ಕೆ 5 ಲಕ್ಷ ಹಣ ಕೊಡುವಂತೆ ಮೀಟರ್ ಬಡ್ಡಿ ದಂಧೆಕೋರರು ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. 
 


ತುಮಕೂರು(ನ.02):  ನೇಣು ಬಿಗಿದುಕೊಂಡು ಪೌರ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಬ್ಬಿ ಪಟ್ಟಣದ ಹೊಸ ಕಾಲೋನಿಯಲ್ಲಿ ಇಂದು(ಶನಿವಾರ) ನಡೆದಿದೆ. ಅರುಣ್ ಕುಮಾರ್ (34) ಆತ್ಮಹತ್ಯೆಗೆ ಶರಣಾದ ದುರ್ದೈವಿ. 

ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅರುಣ್ ಕುಮಾರ್ ಗುಬ್ಬಿ ಪಟ್ಟಣ ಪಂಚಾಯತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಅರುಣ್ ಕುಮಾರ್ 1 ಲಕ್ಷ ಹಣವನ್ನ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದರು. ಸಾಲ ಪಡೆದಿದ್ದ 1 ಲಕ್ಷ ಹಣಕ್ಕೆ 5 ಲಕ್ಷ ಹಣ ಕೊಡುವಂತೆ ಮೀಟರ್ ಬಡ್ಡಿ ದಂಧೆಕೋರರು ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. 

Tap to resize

Latest Videos

ಕೊಪ್ಪಳ: ಬರೀ ಹೆಣ್ಣು ಹೆತ್ತಳು ಅಂದಿದ್ದಕ್ಕೆ ಆತ್ಮಹತ್ಯೆ, 4 ತಿಂಗಳ ಹಸುಗೂಸು ಸೇರಿ 3 ಮಕ್ಕಳು ತಬ್ಬಲಿ!

ಇದರಿಂದ ಮನನೊಂದ ಅರುಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.  ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

click me!